ಶಿಕ್ಷಣವೇ ವನಿತೆಯರ ಸ್ವಾಭಿಮಾನ ಹೆಚ್ಚಿಸುವ ಆಯುಧ

ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಸ್ವರೂಪ್ ಪ್ರಕಾಶ್, ತಹಸೀಲ್ದಾರ್ ಗೀತಾ, ಎಚ್.ಎಲ್.ಮಲ್ಲೇಶಗೌಡ ಇತರರಿದ್ದರು.
ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಶಾಸಕ ಸ್ವರೂಪ್ ಪ್ರಕಾಶ್, ತಹಸೀಲ್ದಾರ್ ಗೀತಾ, ಎಚ್.ಎಲ್.ಮಲ್ಲೇಶಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿಕ್ಷಣವೇ ವನಿತೆಯರ ಸ್ವಾಭಿಮಾನ ಹೆಚ್ಚಿಸುವ ಆಯುಧ
  • ಶಾಸಕ ಸ್ವರೂಪ್ ಪ್ರಕಾಶ್ ಅಭಿಪ್ರಾಯ
  • ಮಹಿಳಾ ದಿನಾಚರಣೆ ಕಾರ್ಯಕ್ರಮ
ಹಾಸನ: ಬಾಲ್ಯದಿಂದಲೇ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೌರ್ಜನ್ಯ ತಡೆಗೆ ಮುಂದಾಗಬೇಕು. ಶಿಕ್ಷಣವೇ ಮಹಿಳೆಯರಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಸ್ವಾಭಿಮಾನ ನೀಡುವ ಆಯುಧ ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.
ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸಲು ಕೇವಲ ಕಾನೂನುನಷ್ಟೇ ಅಲ್ಲ, ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಹಿಳೆಯರಿಗೆ ಗೌರವ ಕೊಡುವುದನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸಬೇಕು. ಮನೆಯಲ್ಲಿ ಮಕ್ಕಳು ಏನು ಕಲಿಯುತ್ತಾರೋ ಅದೇ ಮುಂದಿನ ಸಮಾಜದ ಸ್ವರೂಪವನ್ನು ನಿರ್ಧರಿಸುತ್ತದೆ. ಪಾಲಕರು, ಶಿಕ್ಷಕರು ಹಾಗೂ ಪ್ರತಿಯೊಬ್ಬ ಪ್ರಜೆ ಕೂಡ ಸಮಾನತೆ, ಮಾನವೀಯತೆ ಮತ್ತು ಸಮಾಜದಲ್ಲಿ ಮೌಲ್ಯಗಳನ್ನು ಬೆಳೆಸಲು ಪಾತ್ರವಹಿಸಬೇಕು ಎಂದರು.
ಮಹಿಳೆಯರು ತಮ್ಮ ಹಕ್ಕುಗಳನ್ನು ಅರಿತುಕೊಂಡಾಗ ಅನ್ಯಾಯದ ವಿರುದ್ಧ ಧೈರ್ಯವಾಗಿ ನಿಲ್ಲಬಹುದು. ಮಹಿಳೆಯರು ಹೆಚ್ಚು ಶಿಕ್ಷಣ ಪಡೆದಷ್ಟೂ ಸಮಾಜದಲ್ಲಿ ಅರಿವು ಹೆಚ್ಚುತ್ತದೆ. ಇದರಿಂದ ದೌರ್ಜನ್ಯಗಳ ಪ್ರಮಾಣ ಕಡಿಮೆಯಾಗಲು ಸಾಧ್ಯ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಚ್.ಎಲ್.ಮಲ್ಲೇಶ್ ಗೌಡ, ತಹಸೀಲ್ದಾರ್ ಗೀತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net