

ಪ್ರಮುಖ ಮುಖ್ಯಾಂಶಗಳು
ಹಾಸನ:
ನಗರದ ಕಸ್ತೂರಬಾ ರಸ್ತೆಯ ಸಿಟಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸುಪ್ರಿಯಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಬುಧವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿತು.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ.