ಮಹಾನಗರ ಪಾಲಿಕೆ, ನಗರ, ಪಟ್ಟಣ ಪ್ರದೇಶಗಳಲ್ಲಿ ಅಂಗಡಿಗಳ ನಾಮಫಲಕಗಳ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳು ಮಾಡುತ್ತವೆ. ಅದೇ ರೀತಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳು ನಿರ್ವಹಣೆ ಮಾಡುತ್ತವೆ. ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೈಗಾರಿಕಾ ಇಲಾಖೆ, ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬ್ಯಾಂಕ್‌ಗಳು, ರಾಷ್ಟೀಯ ಹೆದ್ದಾರಿ ಹಾಗೂ ರೈಲ್ವೆ ನಿಲ್ದಾಣಗಳು, ಪೆಟ್ರೋಲ್ ಬಂಕ್‌ಗಳಲ್ಲಿಯೂ ಕೂಡ ನಾಮಫಲಕಗಳು ಕಡ್ಡಾಯವಾಗಿ ನಿಯಮನುಸಾರ ಅಳವಡಿಸಿರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ತಿಳಿಸಿದರು.