ಅರಕಲಗೂಡು ತಾಲೂಕಿನ ಬಸವಾಪಟ್ಟಣ- ಬೇಡರಕೊಪ್ಪಲು ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿಪೂಜೆ ನೆರವೇರಿಸಿದರು. ಮಹೇಂದ್ರ ಕುಮಾರ್, ಪ್ರಕಾಶ್, ಕಂಬೇಗೌಡ, ಚೇತನ್ ಕುಮಾರ್, ಹರೀಶ್, ಗಣೇಶ್, ರಮೇಶ್, ಮಂಜೇಗೌಡ ಮತ್ತು ಗ್ರಾಮಸ್ಥರು ಇದ್ದರು.
ಅರಕಲಗೂಡು: ತಾಲೂಕಿನ ಬಸವಾಪಟ್ಟಣ- ಬೇಡರಕೊಪ್ಪಲು ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಶಾಸಕರು, ಬಸವಾಪಟ್ಟಣ ಬೇಡರಕೊಪ್ಪಲು ಸಂಪರ್ಕ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ 10 ಲಕ್ಷ ರೂ., ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಮುಖಂಡರಾದ ಮಹೇಂದ್ರ ಕುಮಾರ್, ಪ್ರಕಾಶ್, ಕಂಬೇಗೌಡ, ಚೇತನ್ ಕುಮಾರ್, ಹರೀಶ್, ಗಣೇಶ್, ರಮೇಶ್, ಮಂಜೇಗೌಡ ಮತ್ತು ಗ್ರಾಮಸ್ಥರು ಇದ್ದರು.