ರಸ್ತೆ ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ

 ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಹೇಮಾವತಿ ಪ್ರತಿಮೆಯವರೆಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಡಿಸಿ ಲತಾ ಕುಮಾರಿ ಚಾಲನೆ ನೀಡಿದರು. ದ್ರಾಕ್ಷಾಯಿಣಿ, ಜಗದೀಶ್ ಗಂಗಣ್ಣನವರ್, ಪ್ರಕಾಶ್, ಬಿ.ಪಿ. ಕೃಷ್ಣೇಗೌಡ ಇತರರಿದ್ದರು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಹೇಮಾವತಿ ಪ್ರತಿಮೆಯವರೆಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಡಿಸಿ ಲತಾ ಕುಮಾರಿ ಚಾಲನೆ ನೀಡಿದರು. ದ್ರಾಕ್ಷಾಯಿಣಿ, ಜಗದೀಶ್ ಗಂಗಣ್ಣನವರ್, ಪ್ರಕಾಶ್, ಬಿ.ಪಿ. ಕೃಷ್ಣೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಸ್ತೆ ಸಂಚಾರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ
  • ಡಿಸಿ ಕೆ.ಎಸ್.ಲತಾಕುಮಾರಿ ಸಲಹೆ
  • ಜಾಗೃತಿ ಜಾಥಾಕ್ಕೆ ಚಾಲನೆ
ಹಾಸನ: ಅಪಘಾತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯದಲ್ಲೇ ಹಾಸನ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಅಪಘಾತಗಳನ್ನು ತಡೆಯಲು ರಸ್ತೆ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಪ್ರಾದೇಶಿಕ ಸಾರಿಗೆ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಮದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಹೇಮಾವತಿ ಪ್ರತಿಮೆಯವರೆಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಜನವರಿ ತಿಂಗಳ ಅಂತ್ಯದವರೆಗೆ ರಸ್ತೆ ಸುರಕ್ಷತೆ ಮಾಸಾಚರಣೆ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಸ್ತೆ ಸುರಕ್ಷತೆಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ವಾಹನ ಚಾಲಕರ ಜೀವದ ಜತೆಗೆ ಪಾದಚಾರಿಗಳ ಜೀವ ಹಾಗೂ ತಮ್ಮನ್ನು ಅವಲಂಬಿತರ ಜೀವನ ಮೇಲೆ ಪರಿಣಾಮ ಬೀರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸಂಚಾರ ನಿಯಮದ ಜತೆಗೆ ಎಚ್ಚರಿಕೆಯಿಂದ ವಾಹನಗಳನ್ನು ಚಲಾಯಿಸಬೇಕು ಎಂದರು.
ರಸ್ತೆ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಸಂಚಾರವಿಲ್ಲದೆ ಜೀವನ ಸಾಗುವುದಿಲ್ಲ. ರಸ್ತೆ ಸಂಚಾರದ ಜತೆಗೆ ಜೀವನದ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸಿ ಹಾಗೂ ಸೀಟ್ ಬೆಲ್ಟ್ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದ್ರಾಕ್ಷಾಯಿಣಿ ಮಾತನಾಡಿ, ಜಿಲ್ಲೆಯನ್ನು ಅಪಘಾತಮುಕ್ತ ಜಿಲ್ಲೆಯಾಗಿ ಮಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ರಸ್ತೆ ಅಪಘಾತಕ್ಕೆ ಒಳಗಾಗುತ್ತಿದ್ದು ಅಪಘಾತಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಅಪಘಾತವಾಗಿ ಮರಣ ಹೊಂದಿದವರಿಗಿಂತ ಗಾಯಗೊಂಡು ಇನ್ನೊಬ್ಬರ ಮೇಲೆ ಅವಲಂಬಿತವಾಗುವುದು ಹೆಚ್ಚಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಪಿ ಕೃಷ್ಣೇಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net