ವ್ಯಸನಮುಕ್ತ ಸಮಾಜಕ್ಕೆ ಎಲ್ಲರ ಸಹಕಾರ ಅಗತ್ಯ

ವಿಶ್ವ ಮಾದಕ ದ್ರವ್ಯ ನಿಷೇಧ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ಅರಿವು ಕಾರ್ಯಕ್ರಮ ಹಾಗೂ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನಾ ಸಮಾರಂಭದಲ್ಲಿ ಹಾಸನ ಉಪ ವಿಭಾಗದ ಪೊಲೀಸ್ ಅಧೀಕ್ಷಕ ಗಂಗಾಧರಪ್ಪ ಮಾತನಾಡಿದರು. ಹೆಮ್ಮಿಗೆ ಮೋಹನ್, ಡಾ.ಸಾವಿತ್ರಿ, ಡಾ.ಎಸ್.ಎ.ನಿತಿನ್  ಇತರರಿದ್ದರು.
ವಿಶ್ವ ಮಾದಕ ದ್ರವ್ಯ ನಿಷೇಧ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ವ್ಯಸನ ಮುಕ್ತ ಅರಿವು ಕಾರ್ಯಕ್ರಮ ಹಾಗೂ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನಾ ಸಮಾರಂಭದಲ್ಲಿ ಹಾಸನ ಉಪ ವಿಭಾಗದ ಪೊಲೀಸ್ ಅಧೀಕ್ಷಕ ಗಂಗಾಧರಪ್ಪ ಮಾತನಾಡಿದರು. ಹೆಮ್ಮಿಗೆ ಮೋಹನ್, ಡಾ.ಸಾವಿತ್ರಿ, ಡಾ.ಎಸ್.ಎ.ನಿತಿನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವ್ಯಸನಮುಕ್ತ ಸಮಾಜಕ್ಕೆ ಎಲ್ಲರ ಸಹಕಾರ ಅಗತ್ಯ
  • ಪೊಲೀಸ್ ಅಧೀಕ್ಷಕ ಗಂಗಾಧರಪ್ಪ ಹೇಳಿಕೆ
ಹಾಸನ: ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದ ವ್ಯಕ್ತಿ ಜೀವನದ ಗುರಿ ಬಿಟ್ಟು ಅಪರಾಧ ಚಟುವಟಿಕೆಗಳತ್ತ ಆಕರ್ಷಿತನಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹಾಸನ ಉಪ ವಿಭಾಗದ ಪೊಲೀಸ್ ಅಧೀಕ್ಷಕ ಗಂಗಾಧರಪ್ಪ ಎಚ್ಚರಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ ಹಾಸನ, ರಾಜೀವ್ ಆಯುರ್ವೇದ ಮಹಾವಿದ್ಯಾಲಯ ಹಾಸನ ಹಾಗೂ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಶ್ವ ಮಾದಕ ದ್ರವ್ಯ ನಿಷೇಧ ದಿನಾಚರಣೆ ಅಂಗವಾಗಿ ಮಾದಕ ವ್ಯಸನ ಮುಕ್ತ ಅರಿವು ಕಾರ್ಯಕ್ರಮ ಹಾಗೂ ಯುವ ರೆಡ್ ಕ್ರಾಸ್ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಸಮಾಜದಲ್ಲಿ ಮಾದಕ ವ್ಯಸನ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ಸುತ್ತಮುತ್ತ ಮಾದಕ ವ್ಯಸನಕ್ಕೆ ಒಳಗಾದವರು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು. ಪೊಲೀಸ್ ಇಲಾಖೆ ಮಾದಕ ವ್ಯಸನಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಪುನರ್ವಸತಿ ಒದಗಿಸಿ ಅವರನ್ನು ಮುಕ್ತವಾಹಿನಿಗೆ ತರಲು ಸಿದ್ಧವಿದೆ ಎಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಸನದ ಪ್ರಾಂತಪಾಲ ಹೆಮ್ಮಿಗೆ ಮೋಹನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ವಿಶೇಷವಾಗಿ ಯುವ ಸಮುದಾಯ ವ್ಯಸನದ ಬಲೆಗೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆೆ. ವಿದ್ಯಾರ್ಥಿಗಳಲ್ಲಿ ಮಾನವೀಯ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುವ ರೆಡ್ ಕ್ರಾಸ್ ಘಟಕವು ಮಹತ್ವದ ಪಾತ್ರ ವಹಿಸಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೀವ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್.ಎ.ನಿತಿನ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಶಿಕ್ಷಣ, ವ್ಯಕ್ತಿತ್ವ ವಿಕಸನ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಡಾ.ಸಾವಿತ್ರಿ ಮಾತನಾಡಿದರು.
ರೆಡ್ ಕ್ರಾಸ್ ಸಂಸ್ಥೆಯ ಶಬ್ಬೀರ್ ಅಹ್ಮದ್, ಜಯೇಂದ್ರ ಕುಮಾರ್, ಎಸ್.ಎಸ್. ಪಾಷಾ, ಬಿ.ಆರ್.ಉದಯ್ ಕುಮಾರ್, ಕೆ.ಟಿ. ಜಯಶ್ರೀ ಹಾಗೂ ಸುರೇಶ್, ಡಾ.ಚೈತ್ರಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net