ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿರುವ ಅತ್ಯಂತ ಬಡ ಕುಟುಂಬಗಳಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು ಎಂಬ ಹಿನ್ನೆಲೆಯಲ್ಲಿ ಅರ್ಹರಿಗೆ ಈ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ಅಲ್ಲದೆ ಸರ್ಕಾರದ ಸೌಲಭ್ಯಗಳಿಗಾಗಿ ಜನರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ, ಕ್ಷೇತ್ರದಲ್ಲಿ ಯಾರಿಗೆ ಸೌಲಭ್ಯದ ಅವಶ್ಯಕತೆ ಇದೆ ಎಂಬುದನ್ನು ಗುರುತಿಸಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೇ ಅವರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ ಪ್ರತಿನಿತ್ಯ ಒಂದಲ್ಲ ಒಂದು ವಾಹನದ ಮೂಲಕ ಅರ್ಹ ಕುಟುಂಬಗಳಿಗೆ ಅಗತ್ಯ ಸಾಮಗ್ರಿ ಹಾಗೂ ಸೌಲಭ್ಯಗಳನ್ನು ತಂದು ಗೌರವ ಪೂರ್ವಕವಾಗಿ ವಿತರಿಸಲಾಗುತ್ತಿದೆ. ಸರ್ಕಾರದ ಈ ಯೋಜನೆಯಿಂದಾಗಿ ಫಲಾನುಭವಿಗಳ ಜೀವನೋಪಾಯಕ್ಕೆ ಭದ್ರತೆ ಸಿಗಲಿದ್ದು, ಅವರ ಮುಂದಿನ ಭವಿಷ್ಯಕ್ಕೆ ಇದೊಂದು ಆಶಾ ಕಿರಣವಾಗಲಿದ್ದು, ಈ ನಿಟ್ಟಿನಲ್ಲಿ ಸೌಲಭ್ಯಗಳು ಬಡ ಕುಟುಂಬಗಳಿಗೆ ತಲುಪಲಿ ಎಂಬುದೇ ನಮ್ಮ ಆಶಯ ಎಂದರು.