

ಪ್ರಮುಖ ಮುಖ್ಯಾಂಶಗಳು
ಹಾಸನ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನಾ ಕೇಂದ್ರ, ಲೈಲ್, ಉಜಿರೆಯ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ 2092ನೇ ಮದ್ಯವರ್ಜನ ಶಿಬಿರಕ್ಕೆ ಸೋಮವಾರ ನಗರದ ಎಂ.ಜಿ. ರಸ್ತೆಯಲ್ಲಿರುವ ಕುರುಹಿನ ಶೆಟ್ಟಿ ಭವನದಲ್ಲಿ ಚಾಲನೆ ನೀಡಲಾಯಿತು.
ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಎಂಟು ದಿನಗಳ ಶಿಬಿರವನ್ನು ಕುರುಹಿನ ಶೆಟ್ಟಿ ಸಭಾಭವನದ ಅಧ್ಯಕ್ಷ ಕೆ.ಸಿ. ಕೃಷ್ಣಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾನವ ಜನ್ಮ ಅತ್ಯಂತ ಶ್ರೇಷ್ಠವಾದುದು. ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಗೂ ಕುಟುಂಬದ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದಕ್ಕಿಂತ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಬದುಕಬೇಕು ಎಂದು ಕರೆ ನೀಡಿದರು.