ವಠಾರದಲ್ಲಿ ವಾಸವಿರುವ ಚಂದ್ರಶೇಖರ್ ಎಂಬುವರು ಎರಡು ಬೈಕ್‌ಗಳನ್ನು ತಮ್ಮ ಮನೆ ಮುಂದೆ ನಿಲ್ಲಿಸಿದ್ದರು. ಶನಿವಾರ ರಾತ್ರಿ 11.30ರ ಸುಮಾರಿಗೆ ಕಳ್ಳರು ಎರಡು ಬೈಕ್‌ಗಳನ್ನು ಕದ್ದೊಯ್ಯಲು ಮುಂದಾಗಿದ್ದರು. ಸ್ವಲ್ಪ ದೂರ ಬೈಕ್‌ಗಳನ್ನು ತಳ್ಳಿಕೊಂಡು ಹೋಗಿ ಒಂದು ಬೈಕ್ ಸ್ಟಾರ್ಟ್ ಮಾಡಲು ಮುಂದಾಗಿದ್ದಾರೆ. ಆದರೆ, ಆ ಬೈಕ್ ಸ್ಟಾರ್ಟ್ ಆಗದ ಕಾರಣ ಆ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಮತ್ತೊಂದು ಬೈಕನ್ನು ಅನತಿ ದೂರದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಗಮನಿಸಿದ ಸ್ಥಳೀಯರು ಬೇಲೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.