ಪುಷ್ಪರವಿ ನ್ಯಾಷನಲ್ ಸ್ಕೂಲ್‌ನಲ್ಲಿ ಆಹಾರ ಮೇಳ

 ಗಂಡಸಿ ಹ್ಯಾಂಡ್‌ಪೋಸ್ಟ್‌ನ ಪುಷ್ಪರವಿ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಆಹಾರ ಮೇಳದಲ್ಲಿ ತಿಂಡಿ, ತಿನಿಸುಗಳನ್ನು ಖರೀದಿ ಮಾಡುತ್ತಿರುವ ಪಾಲಕರು.
ಗಂಡಸಿ ಹ್ಯಾಂಡ್‌ಪೋಸ್ಟ್‌ನ ಪುಷ್ಪರವಿ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಆಹಾರ ಮೇಳದಲ್ಲಿ ತಿಂಡಿ, ತಿನಿಸುಗಳನ್ನು ಖರೀದಿ ಮಾಡುತ್ತಿರುವ ಪಾಲಕರು.
Published on
ಗಂಡಸಿ: ಗಂಡಸಿ ಹ್ಯಾಂಡ್‌ಪೋಸ್ಟ್‌ನ ಪುಷ್ಪರವಿ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಶುಕ್ರವಾರ ಆಹಾರ ಮೇಳ ಆಯೋಜಿಸಲಾಗಿತ್ತು.
ಶಾಲೆಯ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲಕರ ನೆರವಿನಿಂದ ಮನೆಗಳಿಂದ ವಿವಿಧ ಬಗೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನಗಳಾದ ನಾಟಿಕೋಳಿ ಸಾರು, ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಕಬಾಬ್, ಮಟನ್ ಸಾರು ಜತೆಗೆ ರಾಗಿಮುದ್ದೆ, ಚಪಾತಿ, ಒಬ್ಬಟ್ಟು, ಪೂರಿ ಸಾಗು, ಮಸಾಲೆ ದೋಸೆ, ರೈಸ್ ಬಾತ್ ವಿವಿಧ ಬಗೆಯ ಬಜ್ಜಿಗಳು ಸ್ವಸಹಾಯ ಪದ್ಧತಿಯಲ್ಲಿ ಗ್ರಾಹಕರಿಗೆ ಮತ್ತು ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಉಣಬಡಿಸಿದ್ದು ವಿಶೇಷವಾಗಿತ್ತು.
ಪುಷ್ಪ ರವಿ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ರೇವಣ್ಣ ಗೌಡ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕಿ ಗೀತಾ, ಐಟಿಐ ಕಾಲೇಜಿನ ಉಪನ್ಯಾಸಕರಾದ ಚಂದ್ರೇಗೌಡ, ಫಯಾಜ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net