ಪಾಲಿಕೆ ಸೂಪರ್‌ವೈಸರ್ ಪರಶುರಾಮು ಈ ಸಂದರ್ಭ ಮಾತನಾಡಿ, ಸುಪ್ರೀಂಕೋರ್ಟ್ ಆದೇಶದ ಅನ್ವಯ ಸಾರ್ವಜನಿಕ ರಸ್ತೆ ಹಾಗೂ ಫುಟ್ ಪಾತ್‌ಗಳ ಮೇಲಿನ ಎಲ್ಲ ರೀತಿಯ ಅನಧಿಕೃತ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದರು. ಪಾದಚಾರಿಗಳಿಗೆ ಮೀಸಲಾದ ಫುಟ್‌ಪಾತ್‌ಗಳನ್ನು ವ್ಯಾಪಾರಕ್ಕಾಗಿ ಬಳಸುವುದರಿಂದ ಜನರು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು.