ತಾಲೂಕಿನ ಯಸಳೂರು ಪ್ರಾದೇಶಿಕ ವಲಯದಲ್ಲಿ ಮುಂಚೂಣಿ ಅರಣ್ಯ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಮಹತ್ವದ ಜವಾಬ್ದಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಿಸ್ವಾರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.