ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಲೋಹಿತ್ ಕುಮಾರ್ ಹಸಗನೂರು
ಆಲೂರು: ಛಲವಾದಿ ಮಹಾಸಭಾ ಹಾಗೂ ಹಾಸನ ವಾಸನ್ ಐ ಕೇರ್ ಸಹಯೋಗದಲ್ಲಿ ನೇತ್ರ ತಪಾಸಣೆಗೆ ಒಳಪಟ್ಟಿದ್ದ 70 ಜನರಿಗೆ ಜ.4 ರಂದು ಉಚಿತ ಕನ್ನಡಕಗಳನ್ನು ವಿತರಿಸಲಾಗುವುದು ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಲೋಹಿತ್ ಕುಮಾರ್ ಹಸಗನೂರು ತಿಳಿಸಿದರು.
ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ಕೆ.ಶಿವರಾಂ ಅವರ ಹುಟ್ಟುಹಬ್ಬದ ಅಂಗವಾಗಿ ಹಾಸನದ ವಾಸನ್ ಐ ಕೇರ್ ಸಹಯೋಗದಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಮಾರು 220 ಜನರು ನೇತ್ರ ತಪಾಸಣೆ ಮಾಡಿಸಿದ್ದು, ಈ ಪೈಕಿ ಸುಮಾರು 70 ಜನರಿಗೆ ಕಣ್ಣಿನ ದೃಷ್ಟಿ ದೋಷ ಕಂಡು ಬಂದಿತ್ತು. ಈ ನಿಟ್ಟಿನಲ್ಲಿ 70 ಜನರಿಗೆ ಜ.4 ರಂದು ಮಧ್ಯಾಹ್ನ 3 ಗಂಟೆಗೆ ಆಲೂರು ಬಸ್ ನಿಲ್ದಾಣದ ಆಟೋ ನಿಲ್ದಾಣದಲ್ಲಿ ಕನ್ನಡಕ ವಿತರಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮಕ್ಕೆ ಸಂಸದ ಶ್ರೇಯಸ್ ಪಟೇಲ್, ರಾಜ್ಯ ಛಲವಾದಿ ನಾಯಕ ಮುರಳಿ ಮೋಹನ್ ಹಾಗೂ ವಾಸನ್ ಐ ಕೇರ್‌ನ ಮೋಹನ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಚಲವಾದಿ ಮಹಾಸಭಾ ಅಧ್ಯಕ್ಷ ಲೋಕೇಶ್ ಅಜ್ಜೇನಹಳ್ಳಿ, ತಾಲೂಕು ಗೌರವಾಧ್ಯಕ್ಷ ಎ.ಟಿ.ಮಲ್ಲೇಶ್, ತಾಲೂಕು ಅಧ್ಯಕ್ಷ ಲೋಹಿತ್‌ಕುಮಾರ್ ಹಸಗನೂರು, ಕಾರ್ಯದರ್ಶಿ ಬಿ.ಎಂ.ಹರೀಶ್, ಜಂಟಿ ಕಾರ್ಯದರ್ಶಿ ಕೆ.ಎಸ್.ಹರೀಶ್, ನಿರ್ದೇಶಕರಾದ ಸಿ.ಈ.ಜಗದೀಶ್, ಬಿ.ಆರ್.ರವಿ ಸುದ್ದಿಗೋಷ್ಠಿಯಲ್ಲಿದ್ದರು.