ವಲಸೆ ಕಾರ್ಮಿಕರಿಗೆ ಆರೋಗ್ಯ ಉಚಿತ ತಪಾಸಣೆ

ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಮಗ್ಗೆ ತೋಟದಲ್ಲಿ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪರಶುರಾಮ ಶಿರೂರ, ಗೌರಮ್ಮ,ಡಾ. ಪ್ರೀತಮ್ ಇತರರಿದ್ದರು.
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಮಗ್ಗೆ ತೋಟದಲ್ಲಿ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪರಶುರಾಮ ಶಿರೂರ, ಗೌರಮ್ಮ,ಡಾ. ಪ್ರೀತಮ್ ಇತರರಿದ್ದರು.
Published on
ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಮಗ್ಗೆ ತೋಟದಲ್ಲಿ ಗುರುವಾರ ವಲಸೆ ಕಾರ್ಮಿಕರಿಗೆ ಆರೋಗ್ಯ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಇಲಾಖೆ ವತಿಯಿಂದ ನಡೆದ ಶಿಬಿರದಲ್ಲಿ ಹೊರ ರಾಜ್ಯದ ಕೇರಳ, ಬಿಹಾರ, ಉತ್ತರ ಪ್ರದೇಶ ಮುಂತಾದ ಕಡೆಯಿಂದ ವಲಸೆ ಬಂದಿದ್ದ ಕಾರ್ಮಿಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣೆ ಮತ್ತು ಅರೋಗ್ಯ ಅರಿವು ಕಾರ್ಯಕ್ರಮ ಕೈಗೊಳ್ಳಲಾಯಿತು.
ಶಿಬಿರದಲ್ಲಿ ಸುಮಾರು 50 ಕ್ಕಿಂತ ಹೆಚ್ಚು ಕಾರ್ಮಿಕರಿಗೆ ಎಚ್‌ಐವಿ ಸಿಫಿಲಿಸ್, ಎಚ್ ಬಿ ಎಸ್ ಎ ಜಿ ಮಧುಮೇಹ ಹಾಗೂ ಅಧಿಕ ರಕ್ತದ ಒತ್ತಡ ಮುಂತಾದ ಕಾಯಿಲೆಗಳ ಕುರಿತು ಮಾಹಿತಿ ಒದಗಿಸಿ ತಪಾಸಣೆ ಮಾಡಲಾಯಿತು.
ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ, ಪ್ರಯೋಗಶಾಲಾ ತಂತ್ರಜ್ಞೆ ಗೌರಮ್ಮ, ಎನ್‌ಸಿಡಿ ವಿಭಾಗದ ಡಾ. ಪ್ರೀತಮ್, ಆಪ್ತಸಮಾಲೋಚಕ ಉಮೇಶ್, ಶುಶ್ರೂಷಕ ಅಧಿಕಾರಿ ಲಲಿತ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪರಮೇಶ್, ಪ್ರಯೋಗಶಾಲಾ ತಂತ್ರಜ್ಞಾನದ ಶೋಭಾ, ಜಯಪ್ರಕಾಶ್, ನಾರಾಯಣ್, ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಕಾಶ್, ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net