ಸೆಸ್ಕ್ ವಿಭಾಗೀಯ ಕಚೇರಿ ನಿರ್ಮಾಣಕ್ಕೆ ಅಗತ್ಯ ಅನುದಾನ

ತೊಳಲು ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಭರಾಜು ನಿಗಮದಿಂದ ವಿಭಾಗೀಯ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು.ಸಮುನ್, ವಸಂತ ಕುಮಾರ್ ಇತರರಿದ್ದರು.
ತೊಳಲು ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಭರಾಜು ನಿಗಮದಿಂದ ವಿಭಾಗೀಯ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು.ಸಮುನ್, ವಸಂತ ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಕೆ.ಸುರೇಶ್
  • ತೊಳಲು ಗ್ರಾಮ
  • 1 ಕೋಟಿ ರೂ.ವೆಚ್ಚದಲ್ಲಿ
ಬೇಲೂರು: ತೊಳಲು ಗ್ರಾಮ ಭಾಗದ ರೈತರು ಹಾಗೂ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಂತೆ ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಭಾಗೀಯ ಕಚೇರಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ತೊಳಲು ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ 1 ಕೋಟಿ ರೂ.ವೆಚ್ಚದಲ್ಲಿ ನೂತನ ವಿಭಾಗೀಯ ಕಚೇರಿ ಕಟ್ಟಡ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತೊಳಲು ಹಾಗೂ ಸುತ್ತಮುತ್ತಲ ಗ್ರಾಮಗಳ ಜನರಿಗೆ ವಿದ್ಯುತ್ ಸಂಬಂಧಿತ ಸೇವೆಗಳು ಸುಲಭ ಹಾಗೂ ತ್ವರಿತವಾಗಿ ದೊರೆಯಬೇಕೆಂಬ ಉದ್ದೇಶದಿಂದ ಕಚೇರಿ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಒದಗಿಸಲಾಗಿದೆ ಎಂದರು.
ಸಮಸ್ಯೆಗಳಿಗಾಗಿ ಸಾರ್ವಜನಿಕರು ದೂರದ ಕಚೇರಿಗಳಿಗೆ ಓಡಾಡಬೇಕಿತ್ತು. ಆದರೆ ಇದೀಗ ತೊಳಲು ಗ್ರಾಮದಲ್ಲೇ ಕಚೇರಿ ಪ್ರಾರಂಭವಾಗುವುದರಿಂದ ರೈತರು, ವ್ಯಾಪಾರಸ್ಥರು ಹಾಗೂ ಗೃಹ ಬಳಕೆದಾರರಿಗೆ ಅನುಕೂಲವಾಗಲಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡುತಿದ್ದು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಚಾಮುಂಡೇಶ್ವರಿ ವಿದ್ಯುತ್ ಸರಭರಾಜು ನಿಗಮದ ಅಧಿಕಾರಿಗಳು, ಮುಖಂಡರಾದ ಸಮುನ್, ವಸಂತ ಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net