ಬಸವೇಶ್ವರರ ಪ್ರತಿಮೆಗೆ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಕ್ಕೆ

ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಬೇರೆಡೆ ವರ್ಗಾಯಿಸಿ ಡಿಸಿ ಹೊರಡಿಸಿರುವ ಆದೇಶ ಹಿಂಪಡೆಯಲು ಕೋರಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಎ.ಬಿ.ಗುರುಸಿದ್ದೇಶ್, ಅನುರಾಧ ಕುಮಾರಸ್ವಾಮಿ, ಶೇಖರ್, ಶಶಿಧರ್, ಚಂದ್ರಶೇಖರ್ ಇದ್ದರು.
ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಬೇರೆಡೆ ವರ್ಗಾಯಿಸಿ ಡಿಸಿ ಹೊರಡಿಸಿರುವ ಆದೇಶ ಹಿಂಪಡೆಯಲು ಕೋರಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಎ.ಬಿ.ಗುರುಸಿದ್ದೇಶ್, ಅನುರಾಧ ಕುಮಾರಸ್ವಾಮಿ, ಶೇಖರ್, ಶಶಿಧರ್, ಚಂದ್ರಶೇಖರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಕ್ಷಣ ಆದೇಶ ಹಿಂಪಡೆಯಲು ತಹಸೀಲ್ದಾರ್‌ಗೆ ವೀರಶೈವ ಮಹಾಸಭಾ ಮನವಿ
ಅರಸೀಕೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಜಿಲ್ಲಾಧಿಕಾರಿ ಅವರು ಬೇರೆ ಕಾಮಗಾರಿ ಕೈಗೆತ್ತಿಕೊಳ್ಳಲು ಆದೇಶ ಹೊರಡಿಸಿದ್ದು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘಟನೆಯ ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ ಮಾತನಾಡಿ, ವಿಶ್ವಗುರು ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಲು ಕಳೆದ ಜುಲೈನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದರು. ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 40 ಲಕ್ಷ ರೂ. ಮೀಸಲಿರಿಸಿ ಆದೇಶ ಕೂಡ ಹೊರಡಿಸಲಾಗಿತ್ತು. ಆದರೆ ಇದೀಗ ಜಿಲ್ಲಾಧಿಕಾರಿ ಬಸವೇಶ್ವರ ಪ್ರತಿಮೆ ಅನುದಾನವನ್ನು ಬೇರೆಡೆ ಸಮುದಾಯ ಭವನ ನಿರ್ಮಿಸಲು ದಿಢೀರ್ ಹೊಸ ಆದೇಶ ಮಾಡಿರುವುದು ದಾಖಲೆಗಳಿಂದ ತಿಳಿದು ಬಂದಿದೆ. ವಾಸ್ತವ ಮನಗಂಡು ಆದೇಶ ಪರಿಷ್ಕರಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯ ಮಾಡುತ್ತದೆ ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ಎ.ಬಿ.ಗುರುಸಿದ್ದೇಶ್, ಮಹಿಳಾ ಘಟಕದ ಅನುರಾಧ ಕುಮಾರಸ್ವಾಮಿ, ಎಸ್ ಎಂ.ಎಸ್ ಕುಮಾರ್, ಆರ್.ಜಿ.ರಾಘವೇಂದ್ರ, ಆನಂದ್, ಚಂದ್ರಶೇಖರ್, ಶಶಿಧರ್, ಪವನ್ ಎ.ಪಿ, ಜಗದೀಶ್, ವಿರೂಪಾಕ್ಷಪ್ಪ, ಭರತೇಶ್, ಲೋಕೇಶ್ ನೀರಗುಂದ, ಓಂಕಾರಮೂರ್ತಿ, ಮಲ್ಲೇಶ್, ಹೇಮಾವತಿ, ಗೌರಮ್ಮ, ಸರೋಜಾ, ಪ್ರೇಮಾ ಗಿರೀಶ್, ಎ.ಎಲ್.ಮೋಹನ್ ಕುಮಾರ್, ಪಂಚಾಕ್ಷರಿ, ಗಗನ್, ನಂಜುಂಡಸ್ವಾಮಿ, ಲಿಂಗರಾಜು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net