ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸರಸ್ವತಿ ದೇವಸ್ಥಾನ ವೃತ್ತದಲ್ಲಿರುವ ಡಾ.ವಿಷ್ಣುವರ್ಧನ್ ಅವರ ಪುತ್ಥಳಿ ಬಳಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ಅನಿರುದ್ಧ್ ಅವರು ವಿಷ್ಣುವರ್ಧನ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಷ್ಣುವರ್ಧನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್, ಸಾಮಾಜಿಕ ಕಾರ್ಯಕರ್ತ ಗಣೇಶ್ ತಮ್ಲಾಪುರ, ವಿಜಯಕುಮಾರ್ ಇತರರು ಇದ್ದರು.
ಹಾಸನ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸರಸ್ವತಿ ದೇವಸ್ಥಾನ ವೃತ್ತದಲ್ಲಿರುವ ಡಾ.ವಿಷ್ಣುವರ್ಧನ್ ಅವರ ಪುತ್ಥಳಿ ಬಳಿ ಇತ್ತೀಚೆಗೆ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಟ ಅನಿರುದ್ಧ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿಷ್ಣುವರ್ಧನ್ ದೈಹಿಕವಾಗಿ ನಮ್ಮನ್ನೆಲ್ಲಾ ಬಿಟ್ಟು 16 ವರ್ಷ ಕಳೆದರೂ, ಜನರ ಪ್ರೀತಿ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಪ್ರೀತಿಗೆ ಕುಟುಂಬ ಕೃತಜ್ಞರಾಗಿರುತ್ತದೆ ಎಂದು ಹೇಳಿದರು.
ವಿಷ್ಣುವರ್ಧನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್, ಸಾಮಾಜಿಕ ಕಾರ್ಯಕರ್ತ ಗಣೇಶ್ ತಮ್ಲಾಪುರ, ವಿಜಯಕುಮಾರ್ ಇತರರು ಇದ್ದರು.