ಗ್ಯಾಸ್ ಬಗ್ಗೆ ಗ್ರಾಹಕರು ಆತಂಕಪಡುವುದು ಬೇಡ

ಆಲೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಹಕರಿಗೆ ಗ್ಯಾಸ್ ವಿತರಣೆಯಲ್ಲಿ ಆಗುತ್ತಿರುವ ವ್ಯತ್ಯಾಸದ ಬಗ್ಗೆ ಶಾಸಕ ಸಿಮೆಂಟ್ ಮಂಜುರವರ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು. ಉಪ ವಿಭಾಗಾಧಿಕಾರಿ ಹುಲ್ಲುಮನಿ ತಮ್ಮಣ್ಣನವರ್, ತಹಸೀಲ್ದಾರ್ ಮಲ್ಲಿಕಾರ್ಜುನ, ಆಹಾರ ಇಲಾಖೆ ಜಂಟಿ ನಿರ್ದೇಶಕರು,  ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ, ಪ. ಪಂ. ಮುಖ್ಯಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
ಆಲೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಹಕರಿಗೆ ಗ್ಯಾಸ್ ವಿತರಣೆಯಲ್ಲಿ ಆಗುತ್ತಿರುವ ವ್ಯತ್ಯಾಸದ ಬಗ್ಗೆ ಶಾಸಕ ಸಿಮೆಂಟ್ ಮಂಜುರವರ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು. ಉಪ ವಿಭಾಗಾಧಿಕಾರಿ ಹುಲ್ಲುಮನಿ ತಮ್ಮಣ್ಣನವರ್, ತಹಸೀಲ್ದಾರ್ ಮಲ್ಲಿಕಾರ್ಜುನ, ಆಹಾರ ಇಲಾಖೆ ಜಂಟಿ ನಿರ್ದೇಶಕರು, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ, ಪ. ಪಂ. ಮುಖ್ಯಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
Published on
ಆಲೂರು: ಅಡುಗೆ ಗ್ಯಾಸ್ ಬಗ್ಗೆ ಗ್ರಾಹಕರು ಆತಂಕಪಡುವುದು ಬೇಡ. ಪ್ರತಿಯೊಬ್ಬರಿಗೂ ವಿತರಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಗ್ಯಾಸ್ ವಿತರಣೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ತೊಂದರೆ ಕುರಿತು, ಗ್ಯಾಸ್ ಏಜೆನ್ಸಿ, ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಹಕರು ಗ್ಯಾಸ್ ಬುಕ್ ಮಾಡಿದ ೪೫ ದಿನದಲ್ಲಿ ತಪ್ಪದೆ ಗ್ಯಾಸ್ ವಿತರಣೆ ಮಾಡಲಾಗುವುದು. ಗ್ರಾಹಕರು ಗ್ಯಾಸ್ ಗೋಡೌನ್/ಕಚೇರಿಯಲ್ಲಿ ಕಡ್ಡಾಯವಾಗಿ ಒಟಿಪಿ ನಂಬರ್ ಕೊಟ್ಟು ತಮ್ಮ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬೇಕು.
ತಮ್ಮ ಸರದಿ ಬರುವವರೆಗೂ ಅನ್ಯತಾ ಕಚೇರಿ ಬಳಿ ಹೋಗಿ ಸಮಯ ವ್ಯರ್ಥ ಮಾಡಿಕೊಳ್ಳಬಾರದು. ಪ್ರತಿಯೊಬ್ಬ ಗ್ರಾಹಕರಿಗೂ ಗ್ಯಾಸ್ ವಿತರಣೆಯನ್ನು ತಪ್ಪದೆ ಮಾಡಲಾಗುವುದು. ಈ ಹಿಂದೆ ಇದ್ದಂತೆ ತಕ್ಷಣ ಗ್ಯಾಸ್ ದೊರಕುವುದಿಲ್ಲ. ತಮ್ಮ ಬೇಡಿಕೆಗೆ ಅನುಗುಣವಾಗಿ ನಿಯಮಾನುಸಾರ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲಾಗುವುದು.
ಹಲವು ಗ್ರಾಹಕರ ಒಟಿಪಿ ಪಡೆದು ಕಾಳಸಂತೆಯಲ್ಲಿ ಗ್ಯಾಸ್ ಮಾರಾಟವಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಮಸ್ಯೆ ನಿಧಾನವಾಗಿ ಪರಿಹಾರವಾಗುತ್ತದೆ.
ಪಾಶ್ಚಿಮಾತ್ಯ ದೇಶದಲ್ಲಿ ಯುದ್ಧ ಪ್ರಾರಂಭವಾದ ನಂತರ ಗ್ಯಾಸ್ ವಿತರಣೆಯಲ್ಲಿ ವ್ಯತ್ಯಾಸವಾಗಿರುವುದು ನಿಜ. ಯುದ್ಧ ಪ್ರಾರಂಭವಾಗುವ ಮೊದಲು ಸಕಾಲಕ್ಕೆ ಗ್ಯಾಸ್ ದೊರಕುತ್ತಿತ್ತು. ಈಗ ಸಿಲಿಂಡರ್ ಪ್ರಮಾಣ ಕಡಿಮೆ ಬರುತ್ತಿರುವುದರಿಂದ ಬುಕ್ ಮಾಡಿದ ೪೫ ದಿನಗಳಲ್ಲಿ ಸಿಲಿಂಡರ್ ವಿತರಣೆ ಮಾಡಲಾಗುವುದು.
ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರತಿದಿನ ಗ್ಯಾಸ್ ಪಡೆಯುವವರ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿದ ಪಟ್ಟಿಯನ್ನು ತಪ್ಪದೆ ಪ್ರದರ್ಶಿಸಬೇಕು. ಈವರೆಗೆ ಆಗಿರುವ ಲೋಪವನ್ನು ಸರಿಪಡಿಸಿಕೊಂಡು ನಿಯಮಾನುಸಾರ ಸಿಲಿಂಡರ್‌ಗಳನ್ನು ವಿತರಣೆ ಮಾಡಬೇಕು. ಭವಿಷ್ಯದಲ್ಲಿ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಬೇಕು. ಸಮಸ್ಯೆ ಬಗೆಹರಿದ ನಂತರ ಮನೆಗಳ ಬಳಿಗೆ ಸಿಲಿಂಡರ್ ವಿತರಿಸಲಾಗುವುದು ಎಂದು ಸೂಚಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹುಲ್ಲುಮನಿ ತಮ್ಮಣ್ಣನವರ್, ತಹಸೀಲ್ದಾರ್ ಮಲ್ಲಿಕಾರ್ಜುನ, ಆಹಾರ ಇಲಾಖೆ ಜಂಟಿ ನಿರ್ದೇಶಕರು, ಅಧಿಕಾರಿಗಳು, ಗ್ಯಾಸ್ ಏಜೆನ್ಸಿ ಮಂಜುನಾಥ್, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ, ಪ. ಪಂ. ಮುಖ್ಯಾಧಿಕಾರಿ ಮಂಜುನಾಥ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net