ವಿದ್ಯಾರ್ಥಿಗಳು ಈ ಸಂದರ್ಭ ಪಡೆದುಕೊಂಡ ವಾಲಿಬಾಲ್ ಕಿಟ್ ಅನ್ನು ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಬಳಕೆ ಮಾಡಬೇಕು. ಸ್ವಸ್ಥ ದೇಹದಲ್ಲಿ ಸ್ವಸ್ಥ ಮನಸ್ಸಿರುತ್ತದೆ ಎಂಬ ಮಾತಿನಂತೆ ಕ್ರೀಡೆ ದೈಹಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ಎಂದು ಹೇಳಿದರು. ಮೈ ಭಾರತ್ ಕೇಂದ್ರದ ಜಿಲ್ಲಾ ಸಂಯೋಜಕ ಆನಂದ್, ಕಾಲೇಜಿನ ಸಹ ಪ್ರಾಧ್ಯಾಪಕ ರಮೇಶ್, ಕ್ರೀಡಾ ಸಂಚಾಲಕ ನಟರಾಜ್, ಎನ್ನೆಸ್ಸೆಸ್ ಅಧಿಕಾರಿ ಡಾ.ರಾಘವೇಂದ್ರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.