ಮನೆ ಮನೆಗೆ ತೆರಳಿ ಗ್ಯಾರಂಟಿ ಯೋಜನೆ ತಿಳಿಸಿ

 ಹಗರೆಯಲ್ಲಿ ನೆಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಶಿವರಾಂ.
ಹಗರೆಯಲ್ಲಿ ನೆಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಶಿವರಾಂ.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಬಿ.ಶಿವರಾಮ್ ಸಲಹೆ
  • ಕಾಂಗ್ರೆಸ್ ಕಾರ್ಯಕರ್ತರ ಸಭೆ
ಹಗರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ಮನೆ ಮನೆಗೆ ತೆರಳಿ ಜನರಿಗೆ ತಿಳಿಸಬೇಕು. ಕಾರ್ಯಕರ್ತರೇ ನಮ್ಮ ಬೆನ್ನೆಲುಬು ಎಂದು ಮಾಜಿ ಸಚಿವ ಬಿ.ಶಿವರಾಮ್ ತಿಳಿಸಿದರು.
ಹಗರೆಯ ಮೋಕ್ಷಿತ್ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಾದೀಹಳ್ಳಿ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಡಿ.6ರಂದು ಹಾಸನ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಆಗಮಿಸಬೇಕು ಎಂದರು.
ಬಿಹಾರದಲ್ಲಿ ಚುನಾವಣೆಗೂ ಮೊದಲು ಪ್ರತಿ ಮಹಿಳೆಗೆ ಹತ್ತು ಸಾವಿರ ರೂ. ನೀಡಿದ್ದರು. ಜತೆಗೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದರು. ಇಲ್ಲಿ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದರೂ ನಾವು ಸೋಲುತ್ತಿದ್ದೇವೆ ಎಂದರೆ ನಮ್ಮಲ್ಲಿ ಕೊರತೆ ಕಾಡುತ್ತಿದೆ. ಹಾಗಾಗಿ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡದಿದ್ದಲ್ಲಿ ಬೂತ್ ಮಟ್ಟದಲ್ಲಿ ಮತಗಳು ಪರಿವರ್ತನೆಯಾಗುವುದಿಲ್ಲ. ಸದ್ಯದಲ್ಲೇ ಸ್ಥಳೀಯ ಚುನಾವಣೆಗಳು ಎದುರಾಗುತ್ತಿದೆ. ಮತ ಕೇಳುವಷ್ಟು ಶಕ್ತಿಯನ್ನು ಸರ್ಕಾರ ನಮಗೆ ನೀಡಿದೆ ನಾವು ಬಳಸಿಕೊಳ್ಳಬೇಕಷ್ಟೆ ಎಂದರು.
ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಮಾತನಾಡಿ, ನಮ್ಮ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯದವರೂ ಕಾಪಿ ಮಾಡುತ್ತಿದ್ದಾರೆ. ಇದರಿಂದಲೇ ನಾವು ಎಷ್ಟು ಬಲಿಷ್ಠರು ಎಂದು ತಿಳಿಯಲಿದೆ. ಈ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಸಭೆಯಲ್ಲಿ ಬಂಟೇನಹಳ್ಳಿಯ 20ಕ್ಕೂ ಹೆಚ್ಚು ಗ್ರಾಮಸ್ಥರು ಸೇರಿದಂತೆ ಹಲವು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೇಲೂರು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ನಿಶಾಂತ್, ಬೇಲೂರು ಹಳೇಬೀಡು ಪ್ರಾಧಿಕಾರದ ಅಧ್ಯಕ್ಷ ತೌಫಿಕ್, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ರವೀಶ್ ಬಸವಾಪುರ, ಭೀಮೆಗೌಡ, ರಾಮೇಗೌಡ, ಪ್ರಮೀಳಾ, ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯಾ ಆನಂದ್, ತಾಲೂಕು ಕೆಡಿಪಿ ಸದಸ್ಯೆ ಜ್ಯೋತಿ, ಸಂತೋಷ್, ಪಡುವಳಲು ಉದಯ್ ಕುಮಾರ್, ಹಗರೆ ರವಿಕುಮಾರ್, ಆನಂದ್, ಮಹದೇವಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net