ದೇವರ ಪುಷ್ಪ ಮಂಟಪೋತ್ಸವ ಮೆರವಣಿಗೆ

ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ದೇವರ ಪುಷ್ಪ ಮಂಟಪೋತ್ಸವ ಅದ್ದೂರಿಯಾಗಿ ಜರುಗಿತು.
ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ದೇವರ ಪುಷ್ಪ ಮಂಟಪೋತ್ಸವ ಅದ್ದೂರಿಯಾಗಿ ಜರುಗಿತು.
Published on
ಬೇಲೂರು: ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ 6ನೇ ದಿನ ದೇವರ ಪುಷ್ಪ ಮಂಟಪೋತ್ಸವ ಅತ್ಯಂತ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ರಾತ್ರಿ ನೆರವೇರಿತು.
ಪುಷ್ಪ ಮಂಟಪೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಉತ್ಸವ ಮೂರ್ತಿಯನ್ನು ಮಂಟಪದಲ್ಲಿ ಪ್ರತಿಷ್ಟಾಪಿಸಿ ದೇಗುಲದ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ಪುಷ್ಪ ಮಂಟಪೋತ್ಸವವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಉತ್ಸವದ ಸೇವಾರ್ಥದಾರರಾದ ತಾಲೂಕು ಆಡಳಿತದ ಪರವಾಗಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮತ್ತು ಸಿಬ್ಬಂದಿ ವರ್ಗದವರಿಂದ ಶ್ರೀ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಂಗಳವಾದ್ಯದೊಂದಿಗೆ ದೇಗುಲದ ಅಷ್ಟ ಬೀದಿಗಳಲ್ಲಿ ದೇವರ ಪುಷ್ಪ ಮಂಟಪೋತ್ಸವವನ್ನು ಮೆರವಣಿಗೆಯಲ್ಲಿ ಕೊಡೊಯ್ಯಲಾಯಿತು. ದೇವಾಲಯದ ದೇಗುಲದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರ್, ನರಸಿಂಹ ಪ್ರಿಯಭಟ್ಟರ್, ಇಒ ಯೋಗೇಶ್ ಮತ್ತು ತಾಲೂಕು ಆಡಳಿತದ ಸಿಬ್ಬಂದಿ, ಅಡ್ಡೆಗಾರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net