ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಉತ್ತಮ ತರಬೇತಿ ಅಗತ್ಯ

ಬೇಲೂರಿನ ಗೆಂಡೇಹಳ್ಳಿ ರಸ್ತೆಯಲ್ಲಿರುವ ಎಕ್ಸಲೆಂಟ್ ಅಕಾಡೆಮಿ ಆಫ್ ಎಜುಕೇಷನ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಶಿಬಿರವನ್ನು  ಪಿಎಸ್‌ಐ ಶಿವನಗೌಡ.ಜಿ.ಪಾಟೀಲ್ ಉದ್ಘಾಟಿಸಿದರು.
ಬೇಲೂರಿನ ಗೆಂಡೇಹಳ್ಳಿ ರಸ್ತೆಯಲ್ಲಿರುವ ಎಕ್ಸಲೆಂಟ್ ಅಕಾಡೆಮಿ ಆಫ್ ಎಜುಕೇಷನ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಶಿಬಿರವನ್ನು ಪಿಎಸ್‌ಐ ಶಿವನಗೌಡ.ಜಿ.ಪಾಟೀಲ್ ಉದ್ಘಾಟಿಸಿದರು.
Published on
ಬೇಲೂರು : ಇಂದಿನ ಸ್ಪರ್ಧಾತ್ಮಕ ಕಾಲ ಘಟ್ಟದಲ್ಲಿ ಎಷ್ಟು ಓದಿದರೂ, ಬರೆದರೂ ಸಾಲದು. ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಬೇಕಾದರೆ ಏಕಾಗ್ರತೆಯಿಂದ ಉತ್ತಮ ತರಬೇತಿ ಪಡೆದು ಮುನ್ನಡೆಯಬೇಕು ಎಂದು ಪಿಎಸ್‌ಐ ಶಿವನಗೌಡ ಜಿ.ಪಾಟೀಲ್ ಹೇಳಿದರು.
ಪಟ್ಟಣದ ಗೆಂಡೇಹಳ್ಳಿ ರಸ್ತೆಯಲ್ಲಿರುವ ಎಕ್ಸಲೆಂಟ್ ಅಕಾಡೆಮಿ ಆಫ್ ಎಜುಕೇಷನ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ಒಂದು ದಿನದ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರದ್ಧೆ, ಶ್ರಮ ವಹಿಸಿ ಮುನ್ನಡೆಯುವುದರಿಂದ ಮಾತ್ರ ನಮ್ಮ ಎಲ್ಲ ಸಾಧನೆಗಳಿಗೂ ಬೆಲೆ ಸಿಗುತ್ತದೆ. ಆದ್ದರಿಂದ ಸ್ಪರ್ಧಾಕಾಂಕ್ಷಿಗಳು ಹೆಚ್ಚು ಉಪಯುಕ್ತವಾದ ಪುಸ್ತಕಗಳು ಹಾಗೂ ತರಬೇತಿ ಕೇಂದ್ರದಲ್ಲಿ ಹೇಳಿ ಕೊಡುವ ವಿಷಯಗಳನ್ನು ಏಕಾಗ್ರತೆಯಿಂದ ಕೇಳಿ ಅದನ್ನು ಬರೆಯುವಂತ್ತಾಗಬೇಕು. ಆಗ ಮಾತ್ರ ಯಶಸ್ಸು ಸಾಧ್ಯ ಎಂದರು.
ಎಕ್ಸಲೆಂಟ್ ಅಕಾಡೆಮಿ ಆಫ್ ಎಜುಕೇಷನ್ ಸಂಸ್ಥೆ ಸಂಸ್ಥಾಪಕ ಹರೀಶ್ ಮಾತನಾಡಿ, ವಿದ್ಯಾರ್ಥಿಗಳು ದೂರದ ಊರಿಗೆ ಹೋಗಿ ತಯಾರಾಗುವ ಬದಲು ಹತ್ತಿರದಲ್ಲೇ ಇರುವ ಸಂಸ್ಥೆಯಲಿ ಅದರಲ್ಲೂಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ಸಿಗುತ್ತಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳು ಸದೂಪಯೋಗ ಪಡೆದು ಕೊಳ್ಳಬೇಕು ಎಂದರು.
ತರಬೇತಿ ಕೇಂದ್ರದ ಮಾರ್ಗದರ್ಶಕರಾದ ಲಕ್ಷ್ಮಣ್, ಮಂಜುನಾಥ್, ಶಾಂತಕುಮಾರ್, ನಾಗೇಂದ್ರ, ಬಸವರಾಜ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net