ಗೋಪಾಲಕೃಷ್ಣಸ್ವಾಮಿ ದೇವಸ್ಥಾನ ಲೋಕಾರ್ಪಣೆ

ಆಲೂರು ತಾಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಎಚ್.ಡಿ ರೇವಣ್ಣ ಮಾತನಾಡಿದರು. ಡಾ.ಸೂರಜ್ ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್. ಮಂಜೇಗೌಡ, ಕಬ್ಬಿನಹಳ್ಳಿ ಜಗದೀಶ್, ಪಿ.ಎಲ್.ನಿಂಗರಾಜು ಇದ್ದರು.
ಆಲೂರು ತಾಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಎಚ್.ಡಿ ರೇವಣ್ಣ ಮಾತನಾಡಿದರು. ಡಾ.ಸೂರಜ್ ರೇವಣ್ಣ, ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್. ಮಂಜೇಗೌಡ, ಕಬ್ಬಿನಹಳ್ಳಿ ಜಗದೀಶ್, ಪಿ.ಎಲ್.ನಿಂಗರಾಜು ಇದ್ದರು.
Published on
ಆಲೂರು : ಹುಣಸವಳ್ಳಿ ಗ್ರಾಮವು 1977ರಲ್ಲಿ ದೇವೇಗೌಡರಿಗೆ ರಾಜಕೀಯ ಪುನರ್ಜನ್ಮ ನೀಡಿದ ಗ್ರಾಮವಾಗಿದೆ. ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಶ್ರೀ ವೀರಭದ್ರೇಶ್ವರಸ್ವಾಮಿ ದೇವರು ಈ ಗ್ರಾಮದ ಜನರಿಗೆ ಸುಖ,ಶಾಂತಿ ಸುಭಿಕ್ಷೆಯನ್ನು ಉಂಟುಮಾಡಲಿ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿ ಹುಣಸವಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿ ಅವರ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಚೋಳರ ಕಾಲದ ಇತಿಹಾಸವನ್ನು ಹೊಂದಿರುವ ಈ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನವು 800 ವರ್ಷಗಳ ಅತ್ಯಂತ ಪ್ರಾಚೀನ ದೇವಸ್ಥಾನವಾಗಿದ್ದು ಯಾವುದೇ ಸರ್ಕಾರದ ಅನುದಾನವನ್ನು ಪಡೆಯದೆ ಗ್ರಾಮಸ್ಥರೇ ದೇಣಿಗೆ ನೀಡಿ 60 ರೂ. ವೆಚ್ಚದಲ್ಲಿ ದೇವಾಲಯ ನಿರ್ಮಾಣ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಗ್ರಾಮಸ್ಥರ ಕೋರಿಕೆಯಂತೆ ಎಚ್.ಡಿ.ದೇವೇಗೌಡರ ಹೆಸರಿನ ಸಮುದಾಯ ಭವನ ನಿರ್ಮಾಣಕ್ಕೆ ಗ್ರಾಮಸ್ಥರು ಮುಂದಾಗಿರುವುದು ಸಂತೋಷದ ಸಂಗತಿ. ಈ ಕಾರ್ಯಕ್ಕೆ ರಾಜ್ಯಸಭಾ ಸದಸ್ಯರ ಅನುದಾನ, ವಿಧಾನಪರಿಷತ್ ಸದಸ್ಯರ ಅನುದಾನ ಹಾಗೂ ಕೇಂದ್ರ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಿ.ಎಸ್.ಆರ್. ಅನುದಾನದಲ್ಲಿ ಪ್ರಾರಂಭಿಕವಾಗಿ 1 ಕೋಟಿ ರೂ. ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಸೂರಜ್ ರೇವಣ್ಣ, ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ, ಎಚ್.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್ ಮಂಜೇಗೌಡ, ಕಬ್ಬಿನಹಳ್ಳಿ ಜಗದೀಶ್, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಪಿ.ಎಲ್ ನಿಂಗರಾಜು, ಜಿಲ್ಲಾ ಹಿಂದುಳಿದ ವರ್ಗಗಳ ಮುಖಂಡ ಬಿ.ಸಿ ಶಂಕರಾಚಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸಿ.ವಿ.ಲಿಂಗರಾಜು, ನಟರಾಜು ನಾಕಲಗೂಡು, ಗ್ರಾಮದ ಮುಖಂಡರಾದ ರಾಜಪ್ಪಗೌಡ, ಎಚ್.ಬಿ. ಧರ್ಮರಾಜು, ಎಚ್.ಸಿ. ಶಾಂತಕೃಷ್ಣ, ರಾಮಚಂದ್ರ, ಶ್ರೀನಿವಾಸ್, ಸುರೇಶ್, ದಿನೇಶ್, ನಂದೀಶ್, ಲಕ್ಕೇಗೌಡ ಪುಟ್ಟರಾಜೇಗೌಡ, ಸುಬ್ಬೇಗೌಡ, ಮಂಜುನಾಥ್, ಜಯಪಾಲ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net