ಸರ್ಕಾರಿ ನೌಕರರು ಸೇವೆಗೆ ಆದ್ಯತೆ ನೀಡಲಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಬಿ.ಪಿ.ಕೃಷ್ಣೇಗೌಡ, ಗಂಗಾಧರ, ಕೃಷ್ಣಮೂರ್ತಿ ಇತರರು ಇದ್ದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಬಿ.ಪಿ.ಕೃಷ್ಣೇಗೌಡ, ಗಂಗಾಧರ, ಕೃಷ್ಣಮೂರ್ತಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Government employees
ಬೇಲೂರು: ಸರ್ಕಾರಿ ನೌಕರರು ಶಿಸ್ತು, ಸಂಯಮ ಹಾಗೂ ಸಹಬಾಳ್ವೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕ ಸೇವೆಗೆ ಆದ್ಯತೆ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಬಿ.ಪಿ.ಕೃಷ್ಣೇಗೌಡ ಹೇಳಿದರು.
ಪಟ್ಟಣದ ಶ್ರೀಮಂಜುನಾಥ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ಮೇಲೆ ಕೆಲಸದ ಒತ್ತಡದ ನಡುವೆ ಆರೋಗ್ಯದಲೂ ಹೆಚ್ಚಿನ ಕಾಳಜಿ ವಹಿಸಬೇಕು. ಬೇಲೂರು ತಾಲೂಕಿನ ಸರ್ಕಾರಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಶಿಕ್ಷಕರ ಸಂಘದೊಂದಿಗೆ ಕೈಜೋಡಿಸಿ ನೌಕರರ ಹಿತಕ್ಕಾಗಿ ಸದಾ ಸಹಕಾರ ನೀಡಲಾಗುವುದು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ.ಎಂ.ಡಿ ಮಾತನಾಡಿ, ಚುನಾವಣೆಯಲ್ಲಿ ವಿಶ್ವಾಸವಿಟ್ಟು ಆಯ್ಕೆ ಮಾಡಿದ ತಾಲೂಕಿನ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ ಚುನಾವಣೆ ಪ್ರಜಾಪ್ರಭುತ್ವದ ಸೊಬಗಾಗಿದ್ದು, ಅದನ್ನು ಹಬ್ಬದಂತೆ ಸಂಭ್ರಮಿಸಿದ್ದೇವೆ. ಇನ್ನು ಮುಂದೆ ಯಾವುದೇ ಭೇದ ಭಾವವಿಲ್ಲದೆ ಶಿಕ್ಷಕರೆಲ್ಲರೂ ಒಗ್ಗಟ್ಟಿನಿಂದ ಮಕ್ಕಳ ಶೈಕ್ಷಣಿಕ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ಶಿಕ್ಷಕರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಲು ಸಂಘ ಶ್ರಮಿಸಲಿದೆ. ಶಿಕ್ಷಕರ ಹಕ್ಕು ಮತ್ತು ಸೌಲಭ್ಯಗಳ ಪರ ಸಂಘ ಸದಾ ಇರುತ್ತದೆ ಎಂದರು.
ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ, ಗೌರವಾಧ್ಯಕ್ಷ ಅಣ್ಣಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಆರ್.ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಆನಂದ್ ಕುಮಾರ್, ಜಿಲ್ಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಗಣೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಕಾಂತರಾಜು, ಪ್ರಧಾನ ಕಾರ್ಯದರ್ಶಿ ಎಚ್.ಎನ್.ಗಣೇಶ್, ಸಿದ್ಧಾಂರ್ಥ ಸಹಕಾರ ಸಂಘದ ನಿರ್ದೇಶಕ ಸಣ್ಣಸ್ವಾಮಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಧರ್ಮಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ ಕುಮಾರ್, ಉಪಾಧ್ಯಕ್ಷ ಹೇಮಂತ್ ಕುಮಾರ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net