ಗ್ಯಾರಂಟಿ ಯೋಜನೆ ಮುಂದಿನ ಚುನಾವಣೆಗೆ ಅಸ್ತ್ರ

ಬೇಲೂರು ಪಟ್ಟಣ ಸಮೀಪದ ವಿಆರ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿ.ಶಿವರಾಂ ಶಿವರಾಂ ಮಾತನಾಡಿದರು. ಡಾ.ವಿಜಯಕುಮಾರ್, ಶಶಿಧರ್, ನಿಶಾಂತ್, ಎಂ. ಆರ್. ವೆಂಕಟೇಶ್, ಧರ್ಮೇಗೌಡ ಇತರರಿದ್ದರು.
ಬೇಲೂರು ಪಟ್ಟಣ ಸಮೀಪದ ವಿಆರ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬಿ.ಶಿವರಾಂ ಶಿವರಾಂ ಮಾತನಾಡಿದರು. ಡಾ.ವಿಜಯಕುಮಾರ್, ಶಶಿಧರ್, ನಿಶಾಂತ್, ಎಂ. ಆರ್. ವೆಂಕಟೇಶ್, ಧರ್ಮೇಗೌಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಬಿ.ಶಿವರಾಂ ಹೇಳಿಕೆ
ಬೇಲೂರು : ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಬಡವರು ಮತ್ತು ಮಹಿಳೆಯರು ಸಾಕಷ್ಟು ಪ್ರಯೋಜನ ಪಡೆದಿದ್ದು, ಈ ಮೂಲಕ ಮುಂದೆಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದರು.
ಪಟ್ಟಣ ಸಮೀಪದ ವಿಆರ್ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲೂಕು ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಐದು ಗ್ಯಾರಂಟಿ ಯೋಜನೆಗಳೇ ಮುಂದಿನ ಎಲ್ಲ ಚುನಾವಣೆಗೆ ಅಸ್ತ್ರವಾಗಲಿದೆ. ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪುತ್ತಿರುವ ಬಗ್ಗೆ ಮತದಾರರಿಗೆ ತಿಳಿಸಬೇಕು. ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಬಲ ಪಡಿಸಿ, ಸಮರ್ಥರಾದ ಏಜೆಂಟರನ್ನು ನೇಮಕ ಮಾಡಬೇಕು. ಚುನಾವಣೆ ದಿನ ಮಾತ್ರವಲ್ಲ, ಅದನ್ನು ಇಂದಿನಿಂದಲೇ ಕಾರ್ಯಾರಂಭ ಮಾಡಬೇಕು ಎಂದು ತಿಳಿಸಿದರು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಮುಂದಿನ ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಜವಾಬ್ದಾರಿ ಇದೆ. ಬಿ.ಶಿವರಾಂ ಅವರ ಹಾದಿಯಲ್ಲಿ ನಾವು ಸಾಗಬೇಕು. ಪ್ರತಿ ಬೂತ್ ಮಟ್ಟದ ಏಜೆಂಟರು, ಕಾರ್ಯಕರ್ತರೇ ನಮ್ಮ ಪಕ್ಷದ ನಿಜವಾದ ಆಸ್ತಿ. 2023ರ ಚುನಾವಣೆಯಲ್ಲಿ ನಡೆದ ತಪ್ಪುಗಳನ್ನು ಮರೆತು, 2028ರ ಚುನಾವಣೆಯಲ್ಲಿ ಬಿ.ಶಿವರಾಂ ಅವರನ್ನು ಶಾಸಕರನ್ನಾಗಿ ಮಾಡಬೇಕು ಎಂಬುದು ನಮ್ಮ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಕಾರ್ಯಕರ್ತರು ಮನೆಮನೆಗೆ ತೆರಳಿ ಸರಿಯಾದ ಮಾಹಿತಿ ನೇಡಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಜನರ ವಿಶ್ವಾಸ ಇನ್ನಷ್ಟು ಹೆಚ್ಚುತ್ತದೆ. ನಮಗೂ ಕೆಲವೆಡೆ ಬೇಸರವಾಗಿದ್ದರೂ, ಎದೆಗುಂದದೆ ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಮ್ಮ ಜತೆ ಇರುತ್ತೇವೆ ಎಂದರು.
ಕೆಪಿಸಿಸಿ ವಕ್ತಾರ ಡಾ.ವಿಜಯಕುಮಾರ್ ಮಾತನಾಡಿ, ಇತ್ತೀಚಿನ ಚುನಾವಣೆಯಲ್ಲಿ ನಾವು ಏಕೆ ಸೋತಿದ್ದೇವೆ ಎಂಬ ಬಗ್ಗೆ ಆತ್ಮ ವಿಮರ್ಶೆ ಮಾಡಬೇಕು. ಈ ಹಿಂದೆ ಗೆಲುವು ಸಾಧಿಸಿದ್ದ ಕಡೆ ಈ ಬಾರಿ ಕೆಲವೆಡೆ ತುಂಬ ಹಿನ್ನಡೆ ಅನುಭವಿಸಿದ್ದೇವೆ. ಇಂತಹ ಪರಿಸ್ಥಿತಿ ಮರುಕಳಿಸಬಾರದು. ಅದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಅಸಮಾಧಾನ ಮುಂದುವರಿದರೆ ಗೆಲುವು ಕಷ್ಟ ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಶಿಧರ್, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಿಶಾಂತ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ. ಆರ್. ವೆಂಕಟೇಶ್, ಕೆಪಿಸಿಸಿ ಮಾಜಿ ಸದಸ್ಯ ಧರ್ಮೇಗೌಡ, ಜಿಲ್ಲಾ ಕೆಡಿಪಿ ಸದಸ್ಯೆ ಸೌಮ್ಯಾ, ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಮಾಜಿ ಅಧ್ಯಕ್ಷೆ ತೀರ್ಥಕುಮಾರಿ, ಪುರಸಭೆ ಸದಸ್ಯರಾದ ಜಮಾಲ್ ಭರತ್, ಗಿರೀಶ್, ಶಾಂತಕುಮಾರ್, ಮುಖಂಡರಾದ ತುಳಸೀದಾಸ್, ಬಿ.ಎಂ.ಸಂತೋಷ್, ಸತೀಶ್, ಮಂಜುನಾಥ್, ಯಮಸಂಧಿ ಪಾಪು, ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net