ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ

 ಅರಕಲಗೂಡು ತಾಲೂಕಿನ ರಾಮನಾಥಪುರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಅರಕಲಗೂಡು ತಾಲೂಕಿನ ರಾಮನಾಥಪುರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Published on
ಅರಕಲಗೂಡು: ತಾಲೂಕಿನ ರಾಮನಾಥಪುರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ಬುಧವಾರ ವಿಶೇಷ ಪೂಜೆ, ಅಭಿಷೇಕ ಹಾಗೂ ಭಜನಾ ಕಾರ್ಯಕ್ರಮಗಳು ಭಕ್ತಿ-ಭಾವದಿಂದ ನೆರವೇರಿದವು.
ಬೆಳಗ್ಗೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಶಿರಡಿ ಸಾಯಿಬಾಬಾರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಬಳಿಕ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಕ್ತರು ಭಕ್ತಿಗೀತೆಗಳನ್ನು ಹಾಡಿ ಸಾಯಿನಾಮ ಸ್ಮರಣೆ ಮಾಡುವ ಮೂಲಕ ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸಿದರು. ಭಜನೆಯಲ್ಲಿ ಪಾಲ್ಗೊಂಡ ಭಕ್ತರು ಶ್ರೀ ಶಿರಡಿ ಸಾಯಿಬಾಬಾರ ಕೃಪೆಗೆ ಪಾತ್ರರಾದರು.
ಭಕ್ತರಿಗೆ ದೇವಸ್ಥಾನದ ವತಿಯಿಂದ ಪ್ರಸಾದ ವಿತರಿಸಲಾಯಿತು. ಗುರು ಪೂರ್ಣಿಮೆ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆ, ಭಕ್ತಿ ಹಾಗೂ ಸಡಗರದಿಂದ ನಡೆದವು. ಸಮಿತಿಯ ಜನಾರ್ಧನ್, ಕೆ.ಕೆ.ನಾಗರಾಜು, ಮಧು, ಕೇಶವೇಗೌಡ, ಸಿದ್ದಯ್ಯ, ಕೆ.ಎನ್.ಶೀಲಾ, ಅನಿತಾ ಚಿದಾನಂದ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net