ನಂತರ ಮರು ಟೆಂಡರ್ ನಡೆಸುವ ಮೂಲಕ 5.5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸೇತುವೆಯ ಮರು ಕಾಮಗಾರಿ ಪ್ರಾರಂಭಿಸಲಾಯಿತು. ಕಾಮಗಾರಿಯು ಉತ್ತಮವಾಗಿ ಪೂರ್ಣಗೊಂಡಿದೆ. ಬಹುತೇಕ ಮುಕ್ತಾಯ ಹಂತ ತಲುಪಿದೆ. ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತುಂಬಾ ಅನನುಕೂಲವಾಗಿತ್ತು. ಹಾಸನ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಧರ್ಮಸ್ಥಳ, ಸುಬ್ರಮಣ್ಯ ಹಾಗೂ ಮಂಗಳೂರು ಭಾಗಗಳಿಗೆ ಸಂಚರಿಸುವವರಿಗೆ ಈ ರಸ್ತೆಯ ಅವ್ಯವಸ್ಥೆ ಕಿರಿಕಿರಿ ಉಂಟು ಮಾಡಿತ್ತು. ಆ ನಿಟ್ಟಿನಲ್ಲಿ ಇಲಾಖೆ ಮಟ್ಟದಲ್ಲಿ ತುರ್ತು ಕ್ರಮ ವಹಿಸಿ ಕಾಮಗಾರಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗಿತ್ತು. ಕಾಮಗಾರಿಯ ಕೊನೆಯ ಕೆಲಸಗಳು ಪೂರ್ಣಗೊಳ್ಳುತ್ತಿದ್ದು, ಆಗಸ್ಟ್ ತಿಂಗಳಿನಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ ಎಂದರು.