ರಾಮನಾಥಪುರದಲ್ಲಿ ಹನುಮ ಜಯಂತಿ ಸಂಭ್ರಮ

ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಶನಿವಾರ ವಿಜೃಂಭಣೆಯಿಂದ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು.
ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಶನಿವಾರ ವಿಜೃಂಭಣೆಯಿಂದ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು.
Published on
ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ಶನಿವಾರ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶ್ರೀರಾಮ ಸೇನೆ ಸಹಯೋಗದಲ್ಲಿ ಆಯೋಜಿಸಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಅಪಾರ ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಬೆಳಗ್ಗೆ ಕಾವೇರಿ ನದಿ ದಂಡೆ ಮೇಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು.
ಬಳಿಕ ಭಕ್ತರ ಜಯಘೋಷಗಳ ನಡುವೆ ಅಲಂಕೃತ ವಾಹನದಲ್ಲಿ ಶ್ರೀ ಆಂಜನೇಯಸ್ವಾಮಿ ದೇವರ ಮೂರ್ತಿ ಪ್ರತಿಷ್ಠಾಪಿಸಿ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಅಪಾರ ಭಕ್ತರು ಭಾಗವಹಿಸಿ ಕುಣಿದು ಸಂಭ್ರಮಿಸಿದರು. ಹನುಮ ವೇಷಧಾರಿಗಳ ಕುಣಿತ ಗಮನ ಸೆಳೆಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಭಕ್ತರಿಗೆ ಅಲ್ಲಲ್ಲಿ ಅನ್ನ ಸಂತರ್ಪಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net