ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಮಾತನಾಡಿ, ಮದ್ಯಪಾನ, ಧೂಮಪಾನದಂತಹ ದುಶ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದ್ದರಿಂದ ಹೊರಬರುವುದು ಕಷ್ಟ ಎಂಬುದನ್ನು ತಿಳಿಹೇಳಬೇಕಿದೆ. ಮಾದಕ ವಸ್ತುಗಳ ವ್ಯಸನ ಯುವಜನತೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಂತೋಷ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನುಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರೋಗಗಳಿಗೆ ದಾಸ್ಯರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.