ಕಾರ್ತಿಕ ಅಮಾವಾಸ್ಯೆ ಪೂಜೆ

ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಯ ಉತ್ಸವಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಪೂಜಿಸಲಾಯಿತು.
ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಯ ಉತ್ಸವಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಪೂಜಿಸಲಾಯಿತು.
Published on
ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ನ.19ರ ಬುಧವಾರ ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ಆಯೋಜಿಸಲಾಗಿದೆ.
ಅಂದು ಮುಂಜಾನೆ ಶ್ರೀ ಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ, ತಧಿ ಆರಾಧನೆ ಸೇವೆ, ಸಹಸ್ರನಾಮಾರ್ಚನೆ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಸಂಜೆ ಶ್ರೀ ಸ್ವಾಮಿಯ ಮೂಲ ಮೂರ್ತಿಗೆ ಬೆಣ್ಣೆ ಅಲಂಕಾರ, ಕೋಟೆ ರಾಜಬೀದಿಗಳಲ್ಲಿ ಶ್ರೀಗಳವರ ಉತ್ಸವ ನಂತರ ವಿಶೇಷ ಪಟಾಕಿ ಸೇವೆ, ಪ್ರಕಾರೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net