ಪಟ್ಟಣದ ಎಆರ್‌ಟಿಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ, ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50(ಶೇ. ಐವತ್ತರಷ್ಟು ಮಾತ್ರ) ಪಾವತಿ ಮಾಡಲು 21.11.2025 ರಿಂದ 12.12.2025 ವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.