ಸರ್ಕಾರದ ಸವಲತ್ತು ಸದ್ಬಳಕೆಯಾಗಲಿ

ಅರಸೀಕೆರೆ ನಗರದ ವೆಂಕಟೇಶ್ವರ ಕಲಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆ.ಎಂ.ಶಿವಲಿಂಗೇಗೌಡ ಉದ್ದಾಟಿಸಿದರು. ಧರ್ಮಶೇಖರ್, ಸುಂದರರಾಜ್, ಬಿಳಿಚೌಡಯ್ಯ ಶಿವಮೂರ್ತಿ ಇದ್ದರು.
ಅರಸೀಕೆರೆ ನಗರದ ವೆಂಕಟೇಶ್ವರ ಕಲಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೆ.ಎಂ.ಶಿವಲಿಂಗೇಗೌಡ ಉದ್ದಾಟಿಸಿದರು. ಧರ್ಮಶೇಖರ್, ಸುಂದರರಾಜ್, ಬಿಳಿಚೌಡಯ್ಯ ಶಿವಮೂರ್ತಿ ಇದ್ದರು.
Published on
ಅರಸೀಕೆರೆ: ರೈತರು ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ನಗರದ ವಾಚನಾಲಯ ರಸ್ತೆಯಲ್ಲಿರುವ ವೆಂಕಟೇಶ್ವರ ಕಲಾ ಭವನದಲ್ಲಿ ಕರ್ನಾಟಕ ಸರ್ಕಾರ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಭಾನುವಾರ 2023 ಹಾಗೂ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಅರಸೀಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಿಸಿ ಕೊಡುವ ಜತೆಗೆ ವಿದ್ಯುತ್ ಸಂಪರ್ಕದ ಪರಿಕರವನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಇಂತಹ ಸವಲತ್ತನ್ನು ಪಡೆದು ಕೃಷಿಯಲ್ಲಿ ದುಡಿಮೆ ಕಂಡುಕೊಳ್ಳಲು ಅಗತ್ಯವಿದೆ. ಕ್ಷೇತ್ರದಲ್ಲಿ ವಿದ್ಯುತ್ ಕ್ಷಾಮ ನೀಗಿಸಲು ವಿವಿಧ ಹೋಬಳಿ ಕೇಂದ್ರಗಳ ವ್ಯಾಪ್ತಿಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇನ್ನಷ್ಟು ಜನಪರ ಕೆಲಸ ಮಾಡುವ ಮೂಲಕ ಕ್ಷೇತ್ರವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವುದಾಗಿ ಹೇಳಿದರು.
ಸಣ್ಣ ನೀರಾವರಿ ಇಲಾಖೆ ಎಇಇ ಸುಂದರರಾಜ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಜಿಪಂ ಮಾಜಿ ಸದಸ್ಯರಾದ ಬಿಳಿಚೌಡಯ್ಯ, ಸುಲೋಚನಾ ಬಾಯಿ, ಎಚ್. ಟಿ.ಶಿವಮೂರ್ತಿ, ಮಂಜುಳಾ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net