ಮುರಾರ್ಜಿ ವಸತಿ ಶಾಲೆಯಲ್ಲಿ ಗ್ರಾಹಕರ ದಿನಾಚರಣೆ

ಪಟ್ಟಣ ಸಮೀಪದ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮಾನವ ಹಕ್ಕುಗಳ ಕುರಿತು ಕಾರ್ಯಾಗಾರ ಹಾಗೂ ಗ್ರಾಹಕರ ದಿನಾಚರಣೆಯಲ್ಲಿ ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದ ಗಣ್ಯರು.
ಪಟ್ಟಣ ಸಮೀಪದ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮಾನವ ಹಕ್ಕುಗಳ ಕುರಿತು ಕಾರ್ಯಾಗಾರ ಹಾಗೂ ಗ್ರಾಹಕರ ದಿನಾಚರಣೆಯಲ್ಲಿ ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದ ಗಣ್ಯರು.
Published on
ಬೇಲೂರು : ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಲಯನ್ಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಮಾನವ ಹಕ್ಕುಗಳ ಕುರಿತು ಕಾರ್ಯಾಗಾರ ಹಾಗೂ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣ ಸಮೀಪದ ಮುರಾರ್ಜಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಂದ್ರ ಮಾತನಾಡಿ, ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ಅಮೂಲ್ಯ ಹಕ್ಕುಗಳಾಗಿದೆ. ಅವುಗಳ ಬಗ್ಗೆ ವಿದ್ಯಾರ್ಥಿ ಜೀವನದಲ್ಲೇ ತಿಳಿದು ಕೊಳ್ಳುವುದು ಅತ್ಯಂತ ಅವಶ್ಯಕ. ವಿದ್ಯಾರ್ಥಿಗಳು ತಮ್ಮ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ತಿಳಿದುಕೊಂಡು ಸಮಾಜದಲ್ಲಿ ಶಿಸ್ತಿನ ನಾಗರಿಕರಾಗಿ ರೂಪುಗೊಳ್ಳಬೇಕು. ಪ್ರತಿಯೊಬ್ಬರಲ್ಲೂ ಕಾನೂನಿನ ಅರಿವಿದ್ದರೆ ಅನ್ಯಾಯದ ವಿರುದ್ಧ ಧೈರ್ಯವಾಗಿ ಹೋರಾಡಲು ಸಾಧ್ಯ. ಮತ್ತು ಗ್ರಾಹಕರಾಗಿ ನಮ್ಮ ಹಕ್ಕುಗಳನ್ನು ತಿಳಿದುಕೊಂಡು ಜಾಗೃತರಾಗಿರುವುದು ಇಂದಿನ ಅಗತ್ಯವಾಗಿದೆ ಎಂದರು.
ವಕೀಲೆ ಅನ್ನಪೂರ್ಣ, ಲಯನ್ಸ್ ಸಂಸ್ಥೆ ಅಧ್ಯಕ್ಷೆ ತಾರಾಮಣಿ ಸುರೇಶ್ ಮಾತನಾಡಿದರು.
ಲಯನ್ಸ್ ಸಂಸ್ಥೆಯಿಂದ ಮಾನವ ಹಕ್ಕುಗಳ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮೂರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಆದರ್ಶ್, ಮಾಜಿ ಅಧ್ಯಕ್ಷ ಕೆ.ಎಲ್.ಸುರೇಶ್, ವಸತಿ ಶಾಲೆಯ ಪ್ರಾಂಶುಪಾಲೆ ಹೇಮಾವತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net