ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ

 ಲಾಳನಕೆರೆ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಬಳಿಕ ಆಯೋಜಿಸಿದ್ದ ಜನ ಸಂಪರ್ಕ ಸಭೆಯನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ ಉದ್ಘಾಟಿಸಿದರು. ಮೆಟ್ರೋ ಬಾಬು, ಆಗ್ರೋ ಬಾಬು, ಸಂತೋಷ್ ಕುಮಾರ್, ಕೃಷ್ಣೇಗೌಡ, ರಾಮಚಂದ್ರು, ಈಶ್ವರಪ್ಪ, ಜಯರಾಮ್ ಇತರರು ಇದ್ದರು.
ಲಾಳನಕೆರೆ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಬಳಿಕ ಆಯೋಜಿಸಿದ್ದ ಜನ ಸಂಪರ್ಕ ಸಭೆಯನ್ನು ಶಾಸಕ ಕೆ.ಎಂ. ಶಿವಲಿಂಗೇಗೌಡ ಉದ್ಘಾಟಿಸಿದರು. ಮೆಟ್ರೋ ಬಾಬು, ಆಗ್ರೋ ಬಾಬು, ಸಂತೋಷ್ ಕುಮಾರ್, ಕೃಷ್ಣೇಗೌಡ, ರಾಮಚಂದ್ರು, ಈಶ್ವರಪ್ಪ, ಜಯರಾಮ್ ಇತರರು ಇದ್ದರು.
Published on
ಗಂಡಸಿ: ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಹೋಬಳಿಯ ಗಂಡಸಿ ಹ್ಯಾಂಡ್ ಪೋಸ್ಟ್‌ನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭವಾಗಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು.
ಹೋಬಳಿಯ ಪ್ರವಾಸಿ ಮಂದಿರದ ಬಳಿ ಮಂಗಳವಾರ ರಾತ್ರಿ 7 ಗಂಟೆಗೆ ಪ್ರಾರಂಭವಾದ ಲಾಳನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 10 ಹಳ್ಳಿಗಳಿಗೆ 16 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಾದ ಕಲ್ಯಾಣಿ, ಚೆಕ್ ಡ್ಯಾಮ್, ಬಡಾವಣೆಗಳ ರಸ್ತೆ ಅಭಿವೃದ್ಧಿ, ಡಾಂಬರೀಕರಣ, ಸಿ.ಸಿ. ರಸ್ತೆ ಚರಂಡಿಗಳ ಕಾಮಗಾರಿಗಳಿಗೆ ಭೂಮಿಪೂಜೆ ಮತ್ತು ಲಾಳನಕೆರೆ ಗ್ರಾಮ ಪಂಚಾಯಿತಿ ಮಟ್ಟದ ಜನ ಸಂಪರ್ಕ ಸಭೆ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ ನಿರ್ಮಾಣಕ್ಕೆ 3.5 ಕೋಟಿ ರೂ. ಸರ್ಕಾರದಿಂದ ಮಂಜೂರಾತಿ ದೊರೆತಿದೆ. ಸದ್ಯದಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದರು.
ರಾಷ್ಟ್ರೀಯ ಜಲಜೀವನ್ ಮಿಷನ್ ಯೋಜನೆಯಡಿ 750 ಕೋಟಿ ರೂ. ವೆಚ್ಚದಲ್ಲಿ ಅರಸೀಕೆರೆ ಕ್ಷೇತ್ರದ 535 ಹಳ್ಳಿಗಳಿಗೆ ಹೇಮಾವತಿ ನೀರನ್ನು ಗನ್ನಿಕಡ ಬಳಿಯಿಂದ ಪೈಪ್‌ಲೈನ್ ಮೂಲಕ ಹರಿಸಿ ಗಂಡಸಿ ಹ್ಯಾಂ ಪೋಸ್ಟ್ ಬಳಿ ಶುದ್ಧೀಕರಿಸಿ ಮನೆಗಳಿಗೆ ಹರಿಸುವ ಜವಾಬ್ದಾರಿಯನ್ನು ಮೇಘ ಕಂಪನಿಗೆ ಗುತ್ತಿಗೆ ನೀಡಲಾಗಿದ್ದು, ಕೆಲವು ಗ್ರಾಮಗಳಲ್ಲಿ ಪೈಪ್‌ಲೈನ್, ಟ್ಯಾಂಕ್ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸರ್ಕಾರದ ವತಿಯಿಂದ ಗುತ್ತಿಗೆದಾರರಿಗೆ ನೀಡಬೇಕಾಗಿರುವ 73 ಕೋಟಿ ರೂ. ಹಣ ತಡೆಹಿಡಿಯಲಾಗಿದೆ. ಸ್ಥಳೀಯ ಹಳ್ಳಿಗಳ ಗ್ರಾಮ ಪಂಚಾಯಿತಿ ಮಟ್ಟದ ಪಿಡಿಒಗಳು ಕಾಮಗಾರಿಯ ಗುಣಮಟ್ಟ ಪರೀಕ್ಷಿಸಿ ಸರಿ ಇದೆ ಎಂದು ಖಾತ್ರಿಪಡಿಸಿದ ನಂತರ ಬಿಲ್ ಪಾವತಿಸಲು ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು, ಬೋರ್ ವೆಲ್ ನೀರು ಹರಿಸುವಾಗ ಪ್ರತ್ಯೇಕ ಧ್ವನಿಯ ಸೈರನ್ ವ್ಯವಸ್ಥೆ ಮಾಡಲಾಗುವುದು ಎಂದರು.
ಜನ ಸಂಪರ್ಕ ಸಭೆಗೆ ವಿವಿಧ ಸಮಸ್ಯೆಗಳ 100 ಹೆಚ್ಚು ಅರ್ಜಿಗಳು ಬಂದಿದ್ದು, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿ ಉಳಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ಸಮಸ್ಯೆ ಪರಿಹರಿಸುವಂತೆ ತಿಳಿಸಿದರು.
ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಆಗ್ರೋ ಬಾಬು, ಈಶ್ವರಪ್ಪ, ಯರಗನಾಳು ಮಲ್ಲೇಶ್ ನಾಗರಹಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಸದಸ್ಯರಾದ ರಾಮಚಂದ್ರು, ಜಯರಾಮ್ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್, ಗಿರೀಶ್, ಧರ್ಮಣ್ಣ, ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net