ಪೇಟೆ ತಿರುಮಲ ದೇವಾಲಯದಲ್ಲಿ ವಿಶೇಷ ಪೂಜೆ

ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಪೇಟೆ ಬೀದಿಯಲ್ಲಿರುವ  ಪೇಟೆ ತಿರುಮಲ  ದೇವಾಲಯದಲ್ಲಿ ವೈಕುಂಠ ಏಕಾದಶಿಯ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಪೇಟೆ ಬೀದಿಯಲ್ಲಿರುವ ಪೇಟೆ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರಿಗೆ ಲಾಡು ಪ್ರಸಾದ ವಿತರಣೆ
  • ದೇವರಿಗೆ ಪೂಜೆ
ನುಗ್ಗೇಹಳ್ಳಿ: ಹೋಬಳಿ ಕೇಂದ್ರದ ಪೇಟೆ ಬೀದಿಯಲ್ಲಿರುವ ಪೇಟೆ ತಿರುಮಲ ದೇವಾಲಯದಲ್ಲಿ ಮಂಗಳವಾರ ವೈಕುಂಠ ಏಕಾದಶಿಯ ಪ್ರಯುಕ್ತ ವಿಶೇಷ ಪೂಜೆ ಭಕ್ತರಿಗೆ ಲಾಡು ಪ್ರಸಾದ ವಿತರಿಸಲಾಯಿತು.
ಪೇಟೆ ತಿರುಮಲ ದೇವಾಲಯದಲ್ಲಿರುವ ಶ್ರೀ ಭೂವರಾಹ ಸ್ವಾಮಿ, ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಅಭಿಷೇಕ ಮಾಡಲಾಯಿತು. ಬೆಳಗಿನ ಜಾವ 5 ಗಂಟೆಯಿಂದಲೇ ದೇವಾಲಯಕ್ಕೆ ಭಕ್ತರು ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ಶಾಸಕ ಸಿ.ಎನ್. ಬಾಲಕೃಷ್ಣ ಅವರು ದೇವಾಲಯಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೋಬಳಿ ಕೇಂದ್ರವು ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದ್ದು ಮುಂಬರುವ ದಿನಗಳಲ್ಲಿ ಪ್ರವಾಸೋದ್ಯಮದ ದೃಷ್ಟಿಯಿಂದ ಇನ್ನಷ್ಟು ಅಭಿವೃದ್ಧಿಗೆ ಅದ್ಯತೆ ನೀಡುವುದಾಗಿ ತಿಳಿಸಿದರು.
ನುಗ್ಗೇಹಳ್ಳಿ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಸೇರಿದಂತೆ ಅನೇಕ ಗಣ್ಯರು ದೇವರ ದರ್ಶನ ಪಡೆದರು.
ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕೇಶವಾಚಾರ್, ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಆರ್. ನಟರಾಜ್, ಟಿಎಪಿಎಂಎಸ್ ನಿರ್ದೇಶಕ ತೋಟಿ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಮಹದೇವಮ್ಮ ಶಂಕರ್, ಕೃಪಾ ಶಂಕರ್, ಪಟೇಲ್ ಕುಮಾರ್, ಮುರಳಿ, ಫೈನಾನ್ಸ್ ಪ್ರಕಾಶ್, ಬಸವನಪುರ ಪ್ರಕಾಶ್, ಹುಲಿಕೆರೆ ಸಂಪತ್ ಕುಮಾರ್, ಎನ್ ಎಸ್ ಮಂಜುನಾಥ್, ಹೊನ್ನೇಗೌಡ, ಗಿರೀಶ್, ತೋಟಿ ಮಂಜು, ಹೋಟೆಲ್ ರಾಜಣ್ಣ, ಶಿವಕುಮಾರ್, ಗುರುಪ್ರಸಾದ್, ಡೇರಿ ಲೋಕೇಶ್, ಲೋಹಿತ್, ಜೈ ಕೀರ್ತಿ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net