ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ದುರ್ವಾಸನೆ ಬರುತ್ತಿದ್ದು, ರೈತರು ಜಮೀನುಗಳಲ್ಲಿ ಕೆಲಸ ಮಾಡಲು ಸಮಸ್ಯೆಯಾಗುತ್ತಿದೆ. ಅಲ್ಲದೇ, ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ. ಪಕ್ಕದ ಬಾಚನಹಳ್ಳಿ ಗ್ರಾಮದೊಳಗೆ ಬೀದಿ ನಾಯಿಗಳು ಹೆಚ್ಚಾಗಿವೆ. ಘನ ತ್ಯಾಜ್ಯ ವಿಲೇವಾರಿ ವಾಹನವು ಪ್ರತಿದಿನ ಬಾಚನಹಳ್ಳಿ ಮುಖ್ಯ ರಸ್ತೆಯಿಂದಲೇ ಹಾದು ಹೋಗುತ್ತಿರುವುದರಿಂದ ಗ್ರಾಮದಲ್ಲಿ ದುರ್ವಾಸನೆ ಬರುತ್ತಿದೆ. ಪರ್ಯಾಯ ರಸ್ತೆ ಮಾಡಿ ಸಾಗುವಂತೆ ಕೋರಿದರೂ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳ ಸಂಗ್ರಹ ಕೇಂದ್ರವನ್ನು ಮಾಡಬಾರದು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.