ಕಲಾ ವಿಭಾಗದ 2,500 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 1,967 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 5,249 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು 4,685 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ 6,828 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 6,425 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಸನ ನಗರದ ಎಪಿಜೆ ಕಾಲೇಜಿನ ಎಚ್.ಜಿ.ಅರ್ಪಿತಾ ರಾಜ್ಯದಲ್ಲಿ ರ‌್ಯಾಂಕ್ ಪಡೆಯುವುದರೊಂದಿಗೆ ಜಿಲ್ಲೆಗೆ ಪ್ರಥಮ ಪಡೆದಿದ್ದಾಳೆ.