ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಜನ್ಮದಿನ ಆಚರಣೆ

ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಜನ್ಮದಿನವನ್ನು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಚರಿಸಿದರು.
ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಜನ್ಮದಿನವನ್ನು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಚರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಜನ್ಮದಿನ ಆಚರಣೆ
  • ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮ
ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರ ಜನ್ಮದಿನದ ಅಂಗವಾಗಿ ಬುಧವಾರ ನಗರದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ನಗರದ ನೀರು ಬಾಗಿಲು ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ, ಪಟಾಕಿ ಸಿಡಿಸಿ ಕೇಕ್ ಕತ್ತರಿಸಿದರು. ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಸಿಹಿ ಹಂಚಿದರು. ದೇವಾಲಯದಲ್ಲಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಹಾಗೂ ಅವರ ಕುಟುಂಬದ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಾಜಿ ಮೇಯರ್ ಗಿರೀಶ್ ಚನ್ನವೀರಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ಸಮೀರ್, ಸಿ.ಆರ್.ಶಂಕರ್, ವಾಸುದೇವ್, ಮಂಜೇಗೌಡ, ಲಕ್ಷ್ಮಣ್, ವಕೀಲ ಕೆ.ಆರ್.ಇಂದ್ರಕುಮಾರ್, ಬಿದರೆಕೆರೆ ಜಯರಾಂ, ರಘು ಹೊಂಗೆರೆ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net