ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲು ಸಹಕರಿಸಿ

 ಅರಸೀಕೆರೆ  ತಾಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್.ಆರ್.ಸಂತೋಷ್ ಮಾತನಾಡಿದರು. ಮಹಾಲಿಂಗಪ್ಪ, ಚಂದ್ರಶೇಖರ್, ಮುರುಳೀಧರ್, ಲೋಕೇಶ್, ಬಾಲು,ರಾಜೇಶ್, ಬಸವರಾಜು ಇದ್ದರು.
ಅರಸೀಕೆರೆ ತಾಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್.ಆರ್.ಸಂತೋಷ್ ಮಾತನಾಡಿದರು. ಮಹಾಲಿಂಗಪ್ಪ, ಚಂದ್ರಶೇಖರ್, ಮುರುಳೀಧರ್, ಲೋಕೇಶ್, ಬಾಲು,ರಾಜೇಶ್, ಬಸವರಾಜು ಇದ್ದರು.
Published on
ಅರಸೀಕೆರೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಮನವಿ ಮಾಡಿದರು.
ತಾಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಎಚ್‌ಡಿಡಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾನ್ಯ ಕುಟುಂಬದಲ್ಲಿ ಜನಿಸಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಕನ್ನಡಿಗ ಎಚ್.ಡಿ.ದೇವೇಗೌಡರು ಎಂಬುದೇ ಹೆಮ್ಮೆಯ ಸಂಗತಿ. ಶಾಸಕ, ಸಚಿವ, ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿರುವುದು ಜನರ ಕಣ್ಣ ಮುಂದಿದೆ. ಹಿಂದುಳಿದ ವರ್ಗಗಳ ಕಲ್ಯಾಣವನ್ನು
ಗಮನದಲ್ಲಿಟ್ಟುಕೊಂಡು ಆಯೋಗ ರಚಿಸಿ ನ್ಯಾಯ ಒದಗಿಸಿದ್ದಾರೆ. ಇಳಿ ವಯಸ್ಸಿನಲ್ಲಿಯೂ ಎದೆಗುಂದದೆ ಕನ್ನಡ ನಾಡಿನ ಕಲ್ಯಾಣಕ್ಕಾಗಿ ರಾಜ್ಯಸಭೆಯಲ್ಲಿ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದು ಯುವ ಸಮುದಾಯಕ್ಕೆ ಪ್ರೇರಣೆ ನೀಡಿದೆ. ಇಂತಹ ಧೀಮಂತ ರಾಜಕಾರಣಿಯ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಬೇಕು ಎನ್ನುವ ಸಂಕಲ್ಪ ಮಾಡಿದ್ದೇನೆ. ಶೀಘ್ರದಲ್ಲೇ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದರು.
ಮುಖಂಡರಾದ ಮಹಾಲಿಂಗಪ್ಪ, ಬೆಳಗುಂಬ ಚಂದ್ರಶೇಖರ್, ಮುರುಳೀಧರ್, ಲೋಕೇಶ್, ಬಾಲು,ರಾಜೇಶ್, ಬಸವರಾಜು ಸೇರಿದಂತೆ ಸುತ್ತಮುತ್ತಲಿನ ನಾಗರಿಕರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net