ಕೈವಾರ ತಾತಯ್ಯ, ದೇವರ ದಾಸಿಮಯ್ಯ ಜಯಂತಿ ಆಚರಣೆ

ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ  ಕಾಲಜ್ಞಾನಿ ಕೈವಾರ ತಾತಯ್ಯ ಮತ್ತು ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ತಾಪಂ ಇ.ಒ.ಮುನಿರಾಜು, ಪುರಸಭೆ ಮುಖ್ಯಾಧಿಕಾರಿ ಯು.ಎನ್.ಶಿವಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಎ.ಜಗನ್ನಾಥ್, ಬಲಿಜ ಜನಾಂಗದ ಅಧ್ಯಕ್ಷ ಎಚ್.ಜಿ.ವೆಂಕಟೇಶ್ ಮತ್ತಿತರರಿದ್ದರು.

Published on
ಹೊಳೆನರಸೀಪುರ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ತಾಲೂಕು ಆಡಳಿತ ವತಿಯಿಂದ ಮಂಗಳವಾರ ತಾಲೂಕು ಕಚೇರಿಯ ಎಚ್.ಡಿ.ದೇವೇಗೌಡರ ಸಭಾಂಗಣದಲ್ಲಿ ಕಾಲಜ್ಞಾನಿ ಕೈವಾರ ತಾತಯ್ಯ ಮತ್ತು ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿಯನ್ನು ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅಧ್ಯಕ್ಷತೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಪ್ರಮುಖ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲ ಎಚ್.ಎಸ್.ಪ್ರಭುಶಂಕರ್ ಮಹನೀಯರನ್ನು ಕುರಿತು ಮಾತನಾಡಿದರು.
ಸಮಾರಂಭದಲ್ಲಿ ಬಲಿಜ ಜನಾಂಗದ ಹಿರಿಯರಾದ ನಿವೃತ್ತ ಪ್ರಯೋಗಶಾಲಾ ತಂತ್ರಜ್ಞರಾದ ವಿ.ಗೋವಿಂದರಾಜು, ಸಮಾಜ ಸೇವಕಿ ರೂಪಾ ಹರೀಶ್, ದೇವಾಂಗ ಸಮಾಜದ ಹಿರಿಯರು ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಎನ್.ರಾಜೇಶ್, ಶಂಕರ್ ಅವರನ್ನು ಸನ್ಮಾನಿಸಲಾಯಿತು.
ತಾಪಂ ಇ.ಒ.ಮುನಿರಾಜು, ಪುರಸಭೆ ಮುಖ್ಯಾಧಿಕಾರಿ ಯು.ಎನ್.ಶಿವಶಂಕರ್, ಪುರಸಭೆ ಮಾಜಿ ಅಧ್ಯಕ್ಷ ಎ.ಜಗನ್ನಾಥ್, ಬಲಿಜ ಜನಾಂಗದ ಅಧ್ಯಕ್ಷ ಎಚ್.ಜಿ.ವೆಂಕಟೇಶ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ್, ಧನ್ಯಕುಮಾರ್, ಶಂಕರ್, ನರಸಿಂಹ, ದೈಹಿಕ ಶಿಕ್ಷಕ ಪರಿವೀಕ್ಷಕ ಸುಜತ್ ಆಲಿ, ಜಯಶ್ರೀ ಜಗನ್ನಾಥ್ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net