ಅಗತ್ಯ ದಾಖಲೆ ನೀಡಿ ಮತದಾನದ ಹಕ್ಕು ಉಳಿಸಿಕೊಳ್ಳಿ

ಹೊಳೆನರಸೀಪುರ ಪಟ್ಟಣದ ನಿವಾಸದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಸ್ಕರಣೆಯ ಸಿಬ್ಬಂದಿಗೆ ಶ್ರೇಯಸ್ ಎಂ.ಪಟೇಲ್ ಅಗತ್ಯ ಮಾಹಿತಿ ನೀಡಿದರು.
ಹೊಳೆನರಸೀಪುರ ಪಟ್ಟಣದ ನಿವಾಸದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಸ್ಕರಣೆಯ ಸಿಬ್ಬಂದಿಗೆ ಶ್ರೇಯಸ್ ಎಂ.ಪಟೇಲ್ ಅಗತ್ಯ ಮಾಹಿತಿ ನೀಡಿದರು.
Published on
ಹೊಳೆನರಸೀಪುರ: ರಾಜ್ಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಮನೆ ಮನೆ ಸಮೀಕ್ಷೆ ಕಾರ್ಯ ಪ್ರಾರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ಕುಟುಂಬ ಸದಸ್ಯರೊಂದಿಗೆ ಬೂತ್‌ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಸದ ಶ್ರೇಯಸ್ ಎಂ.ಪಟೇಲ್ ಭಾಗಿಯಾದರು.
ಈ ವೇಳೆ ಮಾತನಾಡಿದ ಸಂಸದರು, ಮತದಾರರು ನಿಮ್ಮ ಮನೆಗೆ ಆಗಮಿಸುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಒದಗಿಸುವ ಮೂಲಕ ನಿಮ್ಮ ಹೆಸರು ಹಾಗೂ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಕೇವಲ ಆಡಳಿತ ವ್ಯವಸ್ಥೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. ಆ ಧ್ವನಿಗೆ ಶಕ್ತಿ ನೀಡುವುದು ನಮ್ಮ ಮತದಾನದ ಹಕ್ಕು. ನಾವು ಚಲಾಯಿಸುವ ಪ್ರತಿಯೊಂದು ಮತವೂ ದೇಶದ ಭವಿಷ್ಯ ರೂಪಿಸುವ ಹಾಗೂ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಅಮೂಲ್ಯ ಕರ್ತವ್ಯವಾಗಿದೆ. ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net