ನೋಂದಾಯಿತ ಕಾರ್ಮಿಕರು ಸಕಾಲದಲ್ಲಿ ಸೌಲಭ್ಯ ಪಡೆದುಕೊಳ್ಳಲಿ

ಹೊಳೆನರಸೀಪುರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಯಮುನಾ, ಶಿವಮ್ಮ, ಲಕ್ಷಣ ಇದ್ದರು.
ಹೊಳೆನರಸೀಪುರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಯಮುನಾ, ಶಿವಮ್ಮ, ಲಕ್ಷಣ ಇದ್ದರು.
Published on
ಹೊಳೆನರಸೀಪುರ: ಕಾರ್ಮಿಕ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಇಲಾಖೆಯಲ್ಲಿ ನೋಂದಣಿ ಮಾಡಿಸಿರುವ ಕಾರ್ಮಿಕರು ಸಕಾಲದಲ್ಲಿ ಪಡೆದುಕೊಳ್ಳುವಂತೆ ಕಾರ್ಮಿಕ ಇಲಾಖೆಯ ನಿರೀಕ್ಷಕಿ ಯಮುನಾ ಸಲಹೆ ನೀಡಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಗುರುವಾರ ಕಾರ್ಮಿಕರು ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಮತ್ತು ಕಾನೂನು ಅರಿವು-ನೆರವು ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕ ಸೇತು, ಡಾ ಬಿ.ಆರ್ ಅಂಬೇಡ್ಕರ್ ಸೇವಾ ಕೇಂದ್ರವನ್ನು ಆರಂಭಿಸಿದ್ದು ಮೊಬೈಲ್‌ನಲ್ಲಿ ಕಾರ್ಮಿಕರು ನೋಂದಣಿ ಮಾಡಿಸಲು ಅರ್ಜಿ ಸಲ್ಲಿಸುವುದರ ಜತೆಗೆ ಸರ್ಕಾರದ ವತಿಯಿಂದ ಸಿಗುವ ಸವಲತ್ತು ಕುರಿತು ಖಾತ್ರಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಸರ್ಕಾರಿ ಅಭಿಯೋಜಕರಾದ ಶಿವಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾನೂನಿನ ಮಹತ್ವ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳುವುದರ ಜತೆಗೆ ಇತರರಿಗೆ ಅರಿವು ಮೂಡಿಸಬೇಕು. ಕಾನೂನು ಚೌಕಟ್ಟಿನಲ್ಲಿ ಎಲ್ಲರ ನಡೆ ನಿರಂತರವಾಗಿ ಮುಂದುವರಿಯಬೇಕು. ಕಾನೂನುಬಾಹಿರ ಚಟುವಟಿಕೆಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಮಂತ್ರಿಯಾಗಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸರಳವಾಗಿ ಕಾನೂನನ್ನು ರೂಪಿಸಿ ಜಾರಿಗೆ ತರುವಲ್ಲಿ ಯಶಸ್ವಿಯಾದರು. ಅಂಬೇಡ್ಕರ್ ಅವರ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿ ಪರಿಣಾಮ ಎಲ್ಲರೂ ನೆಮ್ಮದಿಯತ್ತ ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕಾನೂನನ್ನು ಸದಾ ಗೌರವಿಸುವುದರ ಮೂಲಕ ಪ್ರತಿಯೊಬ್ಬರು ಶಾಂತಿಪ್ರಿಯರಾಗಿ ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ತಮ್ಮ ನಿತ್ಯ ಬದುಕಿನಲ್ಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ವಕೀಲ ರಾಜಶೇಖರ್ ಇತರರು ಮಾತನಾಡಿದರು. ಎಚ್.ಡಿ.ಪರಮೇಶ್ ಸೇರಿದಂತೆ ಗ್ರಾಮದ ಕೆಲವು ಪ್ರಮುಖರು ಹಾಗೂ ಹಿರಿಯರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net