ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಸ್ಥಳ ಗುರುತಿಸಿ

ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ರಸ್ತೆ ಸುರಕ್ಷತೆ ಪ್ರಾಧಿಕಾರದ ಸಭೆ ನಡೆಯಿತು. ಡಿಸಿ ಲತಾ ಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾರುತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಇತರರಿದ್ದರು.
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ರಸ್ತೆ ಸುರಕ್ಷತೆ ಪ್ರಾಧಿಕಾರದ ಸಭೆ ನಡೆಯಿತು. ಡಿಸಿ ಲತಾ ಕುಮಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾರುತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ಸ್ಥಳ ಗುರುತಿಸಿ
  • ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಡಿಸಿ ಲತಾ ಕುಮಾರಿ ಸೂಚನೆ
ಹಾಸನ: ನಗರದಲ್ಲಿ ವಾಹನ ನಿಲುಗಡೆ ಸ್ಥಳ ಗುರುತಿಸಲು ಪೊಲೀಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಹಾನಗರ ಪಾಲಿಕೆ ಅಧಿಕಾರಿಗಳ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಸಮಿತಿ ರಚಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ರಸ್ತೆ ಸುರಕ್ಷತೆ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿ, ನಗರ ಪ್ರಮುಖ ರಸ್ತೆ ಹಾಗೂ ವೃತ್ತಗಳ ಮದ್ಯದಲ್ಲಿ ಅಳವಡಿಸಿರುವ ಬ್ಯಾನರ್ ಕಡ್ಡಾಯವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ತಿಳಿಸಿದರು.
ರಸ್ತೆ ಸುರಕ್ಷತೆಯ ಕುರಿತು ಪೋಸ್ಟರ್‌ಗಳನ್ನು ಶಾಲೆಗಳಲ್ಲಿ ಅಳವಡಿಸುವಂತೆ ಹಾಗೂ ಮಳೆಗಾಲ ಆರಂಭವಾಗುತ್ತಿದ್ದು ನಗರದ ಎಲ್ಲೆಡೆ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಿದರು.
ಸೂಚನಾ ನಾಮಫಲಕ ಅಳವಡಿಸುವಂತೆ ಹಾಗೂ ವೇಗ ನಿಯಂತ್ರಣ ನಾಮಫಲಕ ಅಳವಡಿಸುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಖಾಸಗಿ ಬಸ್‌ಗಳು ನಗರ ಪ್ರವೇಶ ನಿಷೇಧಿಸುವಂತೆ ತಿಳಿಸಿದರು.
ಕೆಎಸ್‌ಆರ್‌ಸಿ ಬಸ್‌ಗಳು ಸೂಕ್ತ ಮಾರ್ಗವನ್ನು ಗುರುತಿಸಿ ಕಡ್ಡಾಯವಾಗಿ ಅದೇ ಮಾರ್ಗದಲ್ಲಿ ಚಲಿಸುವಂತೆ ಚಾಲಕರುಗಳಿಗೆ ನಿರ್ದೇಶನ ನೀಡಲು ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾರುತಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net