ಕುಡಿಯುವ ನೀರಿಗೆ ತೊಂದರೆಯಾದರೆ ತಲೆದಂಡ

ಸಕಲೇಶಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಇಒ ಗಂಗಾಧರ್, ಮಹೇಶ್ವರಪ್ಪ, ಎಡಿ ಆದಿತ್ಯಾ ಇದ್ದರು.
ಸಕಲೇಶಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಮಾತನಾಡಿದರು. ಇಒ ಗಂಗಾಧರ್, ಮಹೇಶ್ವರಪ್ಪ, ಎಡಿ ಆದಿತ್ಯಾ ಇದ್ದರು.
Published on
ಸಕಲೇಶಪುರ: ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ತಲೆದಂಡವಾಗುವುದು ನಿಶ್ಚಿತ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಕುಡಿಯುವ ನೀರು ಪೂರೈಕೆ ಸಂಬಂಧ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಬೇಸಿಗೆ ಬೇಗೆ ಹೆಚ್ಚಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಸಿಲಿನ ಝಳ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಏಪ್ರಿಲ್ ಸಮೀಪಿಸಿದರೂ ಮುಂಗಾರು ಮಳೆಯ ಲಕ್ಷಣಗಳಿಲ್ಲದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆ ದಟ್ಟವಾಗಿದೆ. ಆದ್ದರಿಂದ ಯಾವುದೆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸುವುದು ಅಗತ್ಯ.
ತಾಲೂಕಿನ 26 ಗ್ರಾಪಂಗಳಲ್ಲಿ ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಕೆಲವೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ಜಲಮೂಲಗಳಲ್ಲಿ ನೀರಿನ ಕೊರತೆ ಕಂಡುಬಂದಿದೆ. ಇಂತಹ ಗ್ರಾಮಗಳಿಗೆ ಹೆಚ್ಚುವರಿಯಾಗಿ ಕೊಳವೆ ಬಾವಿ ಅಥವಾ ತೆರೆದ ಬಾವಿಯನ್ನು ತುರ್ತು ನಿರ್ವಹಣಾ ನಿಧಿಯಲ್ಲಿ ನಿರ್ಮಿಸಲಾಗುವುದು. ಜಲ ಜೀವನ್ ಮಿಷನ್ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದರು, ತೃಪ್ತಿಕರವಾಗಿಲ್ಲ ಕೆಲವೊಂದು ಗ್ರಾಮಗಳಲ್ಲಿ ಗುತ್ತಿಗೆದಾರರಿಂದಾಗಿ ಕಾಮಗಾರಿ ವಿಳಂಬವಾಗಿದೆ. ಮತ್ತೆ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವಿದ್ಯುತ್ ಇಲಾಖೆಯ ನಡುವಿನ ಹೊಂದಾಣಿಕೆ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಶೇ.80 ರಿಂದ 90 ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಇನ್ನೊಂದು ತಿಂಗಳಿನಲ್ಲಿ ಪೂರ್ಣಗೊಳಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ ಎಂದು ತಿಳಿಸಿದರು.
ಹೆಬ್ಬಸಾಲೆ ಗ್ರಾಪಂ ಹೆನ್ನಲಿ ಗ್ರಾಮ ಸೇರಿದಂತೆ ಐದು ಗ್ರಾಮಗಳಿಗೆ ಪುರಸಭೆ ನೀರಿನ ಘಟಕದಿಂದ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಬ್ಬಸಾಲೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಇಒ ಗಂಗಾಧರ್,ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ,ಎಡಿ ಆದಿತ್ಯಾ ಮುಂತಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net