ಉತ್ತಮ ಕೆಲಸ ಮಾಡಿದಲ್ಲಿ ಜನರ ಮನಸ್ಸಲ್ಲಿ ಉಳಿಯಲು ಸಾಧ್ಯ

ಬೇಲೂರು ತಾಲೂಕು ಕಛೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಪುರಷೋತ್ತಮ್ ಅವರಯ ಚನ್ನರಾಯಪಟ್ಟಣಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದಿಂದ ಸನ್ಮಾನಿಸಲಾಯಿತು. ವೀಣಾ, ಗೀತಾಂಜಲಿ, ಶ್ರುತಿ, ನಾಗರಾಜು, ಮೋಹನ್ ಇತರರಿದ್ದರು.
ಬೇಲೂರು ತಾಲೂಕು ಕಛೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಪುರಷೋತ್ತಮ್ ಅವರಯ ಚನ್ನರಾಯಪಟ್ಟಣಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದಿಂದ ಸನ್ಮಾನಿಸಲಾಯಿತು. ವೀಣಾ, ಗೀತಾಂಜಲಿ, ಶ್ರುತಿ, ನಾಗರಾಜು, ಮೋಹನ್ ಇತರರಿದ್ದರು.
Published on
ಬೇಲೂರು: ಸರ್ಕಾರಿ ನೌಕರರಿಗೆ ವರ್ಗಾವಣೆ ಎಂಬುದು ಸಹಜ ಪ್ರಕ್ರಿಯೆಯಾಗಿದ್ದು ತಮ್ಮ ಕರ್ತವ್ಯದಲ್ಲಿ ಸೇವೆ ಸಲ್ಲಿಸುವಾಗ ಜನಸಾಮಾನ್ಯರಿಗೆ ಸ್ಪಂದಿಸಿ ಉತ್ತಮ ಕೆಲಸಗಳನ್ನು ಮಾಡಿದಾಗ ಮಾತ್ರ ಅವರ ನೆನಪು ಸದಾ ಉಳಿಯಲಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಪುರಷೋತ್ತಮ್, ಚನ್ನರಾಯಪಟ್ಟಣ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಗುರುವಾರ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದಿಂದ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡಿದ ಅವರು, ಆಹಾರ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದ ಆಹಾರ ನಿರೀಕ್ಷಕ ಪುರುಷೋತ್ತಮ್ ಇಲಾಖೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳೊಂದಿಗೆ ಸ್ಪಂದಿಸಿ ಹಲವಾರು ಕೆಲಸಗಳನ್ನು ನಿರ್ವಹಿಸುತಿದ್ದರು. ಅವರ ಕರ್ತವ್ಯ ನಿಷ್ಠೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿರುವುದು ಶ್ಲಾಘನೀಯವಾಗಿದ್ದು, ಮುಂದಿನ ಜಾಗದಲ್ಲೂ ಉತ್ತಮ ಕೆಲಸ ಮಾಡಲಿ ಎಂದರು.
ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಕಾರ್ಯದರ್ಶಿ ಎನ್.ಅನಂತು ಮಾತನಾಡಿ, ಆಹಾರ ಇಲಾಖೆ ನಿರೀಕ್ಷಕರಾದ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿ ಮಾಲೀಕರೊಂದಿಗೆ ಸೌಜನ್ಯದಿಂದ ಇಲಾಖೆಯ ಮಾರ್ಗದರ್ಶನಗಳನ್ನು ಎಲ್ಲರಿಗೂ ತಿಳಿಸುವ ಮೂಲಕ ಸಾರ್ವಜನಿರು ಮತ್ತು ಮಾಲೀಕರ ನಡುವೆ ಉತ್ತಮ ಬಾಂದವ್ಯ ಸೃಷ್ಟಿಸಿ, ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಗಮವಾಗಿ ನಡೆಯುವಂತೆ ನೋಡಿ ಕೊಂಡಿದ್ದಾರೆ ಎಂದರು.
ಆಹಾರ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷೆ ವೀಣಾ, ಶಿರಸ್ತೇದಾರ್ ಗಿತಾಂಜಲಿ, ಆಹಾರ ಗೋದಾಮಿನ ವ್ಯವಸ್ಥಾಪಕಿ ಶ್ರುತಿ, ಸಂಘದ ಗೌರವಾಧ್ಯಕ್ಷ ನಾಗರಾಜು, ಖಜಾಂಚಿ ಮೋಹನ್ ಮುಖಂಡರಾದ ದಯಾನಂದ್, ಲೋಕೇಶ್, ತಿಮ್ಮೇಗೌಡ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net