ಮೂಲಸೌಕರ್ಯದಿಂದ ಶೈಕ್ಷಣಿಕ ಗುಣಮಟ್ಟ ವೃದ್ಧಿ

ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2 ಕೋಟಿ ರೂ. ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಶನಿವಾರ ಭೂಮಿಪೂಜೆ ನೆರವೇರಿಸಿದರು. ಪ್ರಾಂಶುಪಾಲ ಪ್ರದೀಪ್ ಇತರರಿದ್ದರು.
ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2 ಕೋಟಿ ರೂ. ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಎ. ಮಂಜು ಶನಿವಾರ ಭೂಮಿಪೂಜೆ ನೆರವೇರಿಸಿದರು. ಪ್ರಾಂಶುಪಾಲ ಪ್ರದೀಪ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎ. ಮಂಜು ಅಭಿಪ್ರಾಯ
  • ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಚಾಲನೆ

ಅರಕಲಗೂಡು:

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ಇದರಿಂದ ಶೈಕ್ಷಣಿಕ ಗುಣಮಟ್ಟ ಹೆಚ್ಚಲಿದೆ ಎಂದು ಶಾಸಕ ಎ. ಮಂಜು ಹೇಳಿದರು.

ತಾಲೂಕಿನ ಹೊನ್ನವಳ್ಳಿ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2 ಕೋಟಿ ರೂ. ವೆಚ್ಚದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಲು ಸಾಧ್ಯವಾಗಲಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ವಿದ್ಯಾರ್ಥಿಗಳೇ ದೇಶದ ಭವಿಷ್ಯ. ಅವರಿಗೆ ಉತ್ತಮ ಶಿಕ್ಷಣದ ಜತೆಗೆ ಉತ್ತಮ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಜವಾಬ್ದಾರಿ ಎಂದರು.
ಶೈಕ್ಷಣಿಕ ಪ್ರಗತಿ, ವಸತಿ ವ್ಯವಸ್ಥೆ ಹಾಗೂ ಊಟದ ಗುಣಮಟ್ಟದ ಕುರಿತು ಶಾಲಾ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಪ್ರಾಂಶುಪಾಲ ಪ್ರದೀಪ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net