ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ

ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕರೂ ಆದ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ಬಿಳಿ ಚೌಡಯ್ಯ, ಹೇಮಂತ್‌ಕುಮಾರ್, ವೀಣಾ ವಿಶ್ವನಾಥ್, ಭರತ್ ರಾಜ್, ಅಜಯ್, ಶರತ್, ಶ್ರೀಧರ್, ಲಕ್ಷ್ಮೀಶ, ಜಯಣ್ಣ ಇತರರು ಉಪಸ್ಥಿತರಿದ್ದರು.
ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕರೂ ಆದ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ಬಿಳಿ ಚೌಡಯ್ಯ, ಹೇಮಂತ್‌ಕುಮಾರ್, ವೀಣಾ ವಿಶ್ವನಾಥ್, ಭರತ್ ರಾಜ್, ಅಜಯ್, ಶರತ್, ಶ್ರೀಧರ್, ಲಕ್ಷ್ಮೀಶ, ಜಯಣ್ಣ ಇತರರು ಉಪಸ್ಥಿತರಿದ್ದರು.
Published on
ಅರಸೀಕೆರೆ ಗ್ರಾಮಾಂತರ: ತಾಲೂಕಿನ ಬಾಣಾವರ ಪಟ್ಟಣದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಎಂ.ಶಿವಲಿಂಗೇಗೌಡ, ಕನ್ನಡವೆಂಬುದು ಪ್ರತಿಯೊಬ್ಬರ ಅಸ್ಮಿತೆಯಾಗಬೇಕು ಮತ್ತು ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮನಾಗಿ ಬದುಕಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕನ್ನಡ ಶಾಲೆಗಳನ್ನು ಉಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬಾಣಾವರದಲ್ಲೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಬಾಣಾವರ ಗ್ರಾಮವನ್ನು ಮುಂಬರುವ ದಿನಗಳಲ್ಲಿ ತಾಲೂಕು ಕೇಂದ್ರವನ್ನಾಗಿ ಮಾಡುವ ಪಣವನ್ನು ತೊಟ್ಟಿದ್ದು, ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಾಣಾವರ ಗ್ರಾಮ ತಾಲೂಕು ಕೇಂದ್ರವಾಗುವ ಎಲ್ಲ ಲಕ್ಷಣಗಳನ್ನು ಹೊಂದಿದ್ದು, ಈಗಾಗಲೇ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿಸಲಾಗಿದೆ. ಎರಡನೆಯ ಅರಸೀಕೆರೆಯ ರೀತಿಯಲ್ಲಿ ಬಾಣಾವರ ನಗರವನ್ನು ಅಭಿವೃದ್ಧಿಪಡಿಸುವ ಕನಸು ಹೊಂದಿರುವ ನನಗೆ ಎಲ್ಲರೂ ಪಕ್ಷಭೇದ ಮರೆತು ಗ್ರಾಮದ ಅಭಿವೃದ್ಧಿಗೆ ಮತ್ತು ಬಾಣಾವರವನ್ನು ತಾಲೂಕು ಕೇಂದ್ರ ಮಾಡುವ ಹೋರಾಟಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.
ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಬಾಣಾವರ ಕೆರೆಗಳಿಗೂ ಭದ್ರಾ ಯೋಜನೆ ಅಡಿಯಲ್ಲಿ ನೀರು ಹರಿಸುವ ಕಾರ್ಯಕ್ರಮ ಚಾಲ್ತಿಯಲ್ಲಿದೆ. ಬಾಣಾವರ ಕೆರೆಗಳಿಗೂ ಸಹ ಶೀಘ್ರದಲ್ಲೇ ನೀರು ಬರುವ ಲಕ್ಷಣಗಳಿದ್ದು, ಮುಂಬರುವ ದಿನಗಳಲ್ಲಿ ಬಾಣಾವರದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಹೋರಾಟವನ್ನು ಮಾಡುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಅತ್ಯಂತ ಸುಂದರ ಪ್ರಕೃತಿ ಹಾಗೂ ಭೌಗೋಳಿಕ ಹಿನ್ನೆಲೆಯನ್ನು ಹೊಂದಿದ್ದು, ಕನ್ನಡಿಗರು ವಿಶಾಲ ಹೃದಯ ಮತ್ತು ಪ್ರೀತಿ, ವಿಶ್ವಾಸ ತುಂಬಿದ ಮನೋಭಾವ ಉಳ್ಳವರಾಗಿದ್ದು ಎಲ್ಲರನ್ನೂ ಪ್ರೀತಿಸುವ ಮನೋಭಾವ ಹೊಂದಿದ್ದಾರೆ. ಅಲ್ಲದೆ ಕನ್ನಡ ನಾಡು ಹಲವಾರು ಋಷಿಮುನಿಗಳು, ಸಾಹಿತಿಗಳು, ಕಲಾವಿದರು, ಹೋರಾಟಗಾರರು ಹಾಗೂ ಸಮಾಜ ಸುಧಾರಕರಿಗೆ ಜನ್ಮವಿತ್ತಂತಹ ಪುಣ್ಯಭೂಮಿಯಾಗಿದ್ದು, ಈ ನಾಡಿನ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಗಮನಸೆಳೆದ ಸ್ತಬ್ಧಚಿತ್ರ ಮೆರವಣಿಗೆ: ಕನ್ನಡ ರಾಜ್ಯೋತ್ಸವ ಅಂಗವಾಗಿ ಬಾಣಾವರದ ಕನ್ನಡ ವೃತ್ತದಲ್ಲಿ ಬೆಳಗ್ಗೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ನಂತರ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು. ಸಂಜೆ ರಸಮಂಜರಿ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಳಿ ಚೌಡಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎಂ.ಜಯಣ್ಣ, ಬಾಣಾವರ ಗ್ರಾಮ ಪಂಚಾಯತಿ ಸದಸ್ಯರಾದ ಬಿ.ಆರ್.ಸುರೇಶ್, ಡಿ.ಆರ್.ರಾಜು, ಬಿ.ಡಿ.ಮಲ್ಲಿಕಾರ್ಜುನ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಲಕ್ಷ್ಮೀ ಶ್ರೀಧರ್, ಮಂಜುಳಾಬಾಯಿ ಚಂದ್ರ ನಾಯಕ್, ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಗೌರವಾಧ್ಯಕ್ಷ ಬಿ.ಆರ್.ಶ್ರೀಧರ್, ಅಧ್ಯಕ್ಷ ಭರತ್‌ರಾಜ್, ಉಪಾಧ್ಯಕ್ಷ ಅಜಯ್, ಖಜಾಂಚಿ ಶರತ್, ಕಾರ್ಯದರ್ಶಿ ವರುಣ್, ಮುಖಂಡರಾದ ಪಾಪುಸ್ವಾಮಿ, ಕಾಚಿಘಟ್ಟ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಶಂಕರ್, ಮಹೇಶ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಟಿ.ಜಿ. ಚಂದ್ರಪ್ಪ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net