ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸಿ

ನುಗ್ಗೇಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಿವೃತ್ತಿ ಹೊಂದಿದ ರಾಷ್ಟ್ರ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕ ಎಸ್.ಸಿದ್ದರಾಜು, ಪತ್ನಿ ಶಶಿಕಲಾ ಹಾಗೂ ಅಡುಗೆ ಸಿಬ್ಬಂದಿ ಹೇಮಾಕ್ಷಿ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ಅಭಿನಂದಿಸಿದರು. ದೊರೆಸ್ವಾಮಿ, ಕರಿಯಪ್ಪ ಗೌಡ, ರಂಗಸ್ವಾಮಿ, ಶ್ರೀಕಾಂತ್ ಇದ್ದರು.
ನುಗ್ಗೇಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಿವೃತ್ತಿ ಹೊಂದಿದ ರಾಷ್ಟ್ರ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕ ಎಸ್.ಸಿದ್ದರಾಜು, ಪತ್ನಿ ಶಶಿಕಲಾ ಹಾಗೂ ಅಡುಗೆ ಸಿಬ್ಬಂದಿ ಹೇಮಾಕ್ಷಿ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ಅಭಿನಂದಿಸಿದರು. ದೊರೆಸ್ವಾಮಿ, ಕರಿಯಪ್ಪ ಗೌಡ, ರಂಗಸ್ವಾಮಿ, ಶ್ರೀಕಾಂತ್ ಇದ್ದರು.
Published on
ನುಗ್ಗೇಹಳ್ಳಿ: ಕೆಲಸ ಮಾಡುವ ಹುದ್ದೆಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದರೆ ಹೆಸರು ತನ್ನಷ್ಟಕ್ಕೆ ತಾನೇ ಬರುತ್ತದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ನುಗ್ಗೇಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವಯೋನಿವೃತ್ತಿ ಹೊಂದಿರುವ ರಾಷ್ಟ್ರಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕ ಎಸ್.ಸಿದ್ದರಾಜ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಸಾಧನೆಗೆ ಭದ್ರ ಬುನಾದಿ ಹಾಕಲು ಸರ್ಕಾರಿ ಶಾಲಾ ಶಿಕ್ಷಕರು ಕ್ರಮ ವಹಿಸಬೇಕು. ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ಮಕ್ಕಳ ಸಂಖ್ಯೆ ಹೆಚ್ಚಿಸಲು ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು, ಈ ಬಗ್ಗೆ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು.
ಸಿದ್ದರಾಜು ಅವರು ಶಿಕ್ಷಕರಾಗಿ ತಾಲೂಕಿನಲ್ಲಿ 36 ವರ್ಷ ಸುದೀರ್ಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಮೆಚ್ಚುಗೆ ಪಡೆದಿದ್ದಾರೆ. ನಿವೃತ್ತಿಯ ನಂತರವೂ ನುಗ್ಗೇಹಳ್ಳಿ ಹೆಬ್ಬಾಳಲು ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಮುಂದಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸ್ವಾಮಿ, ಆರ್‌ಐ ಲತೇಶ್ ಕುಮಾರ್, ಶಿಕ್ಷಣ ಸಂಯೋಜಕ ಕರಿಯಪ್ಪ ಗೌಡ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್, ಸಿಆರ್‌ಪಿಗಳ ಸಂಘದ ಅಧ್ಯಕ್ಷ ಎಚ್.ಟಿ.ಮಂಜೇಗೌಡ, ಅಶೋಕ್, ಸುಂದರ್, ಮುಖ್ಯ ಶಿಕ್ಷಕ ಮಂಜುನಾಥ್, ಕಾಂತರಾಜ್, ಮುಖಂಡರಾದ ದೊರೆಸ್ವಾಮಿ, ಎಚ್.ಬಿ.ರಂಗಸ್ವಾಮಿ, ಪಟೇಲ್ ಕುಮಾರ್, ಸಂಪತ್ ಕುಮಾರ್, ಮಂಜುನಾಥ್ ಸ್ವಾಮಿ, ಶಿವಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರವೀಣ್, ಶಿಕ್ಷಕಿ ಪವಿತ್ರಾ, ಎನ್.ಆರ್.ಮುರಳಿ, ಜಾವೇದ್, ನಟರಾಜ್, ನಂಜುಂಡೇಗೌಡ, ರಘು, ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net