ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಸ್‌ಆರ್‌ಟಿಸಿ, ಆಟೋ ಮತ್ತು ಟ್ಯಾಕ್ಸಿ ಕ್ಯಾಬ್ ಚಾಲಕರು, ಮಾಲೀಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯ ಕಾರ್ಯದರ್ಶಿ ಗಿರೀಶ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಆರ್. ಕೆಂಚೇಗೌಡ, ಹಿರಿಯ ಮೋಟಾರು ತಪಾಸಣಾಧಿಕಾರಿ ಯಶವಂತ್, ಎಸ್.ಎಸ್. ಪಾಷಾ ಇತರರಿದ್ದರು.