ಪೋಲಿಯೋ ಮುಕ್ತವಾಗಿದ್ದರೂ ತಾತ್ಸಾರ ಬೇಡ

ಅರಸೀಕೆರೆ ಗ್ರಾಮಾಂತರ ತಾಲೂಕು ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಅರಸೀಕೆರೆ ಗ್ರಾಮಾಂತರ ತಾಲೂಕು ಜಯ ಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತಹಸೀಲ್ದಾರ್ ಸಂತೋಷ್ ಕುಮಾರ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
Published on
ಅರಸೀಕೆರೆ ಗ್ರಾಮಾಂತರ: ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು ತಾತ್ಸಾರ ಮಾಡದೆ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ತಹಸೀಲ್ದಾರ್ ಹೇಳಿದರು.
ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೋಟರಿ ಸಂಸ್ಥೆಯಿಂದ ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಿದ್ದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯವಂತ ಸಮಾಜದಿಂದ ಮಾತ್ರ ಸದೃಢ ಭಾರತ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪೋಲಿಯೋ ಲಸಿಕೆ ಅಭಿಯಾನ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ. ಸರ್ಕಾರಗಳ ಜತೆಗೆ ಸಂಘಟನೆಗಳು ಕೈಜೋಡಿಸುತ್ತಿರುವುದು ಸಂತಸದ ವಿಷಯ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ರಂಗನಾಥ್ ಮಾತನಾಡಿ, ನಗರ ಸೇರಿದಂತೆ ತಾಲೂಕಿನಲ್ಲಿ 17,600 ಮಕ್ಕಳನ್ನು ಗುರುತಿಸಲಾಗಿದೆ. 150 ಕೇಂದ್ರಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಂಡಿದ್ದು 650ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ರೋಟರಿ ಸಂಸ್ಥೆಯ ಸಹಾಯಕ ಪ್ರಾಂತಪಾಲ ಬಿ.ಕೆ.ಯೋಗೀಶ್ ಆಚಾರ್, ಜೆಸಿ ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ಎಂ.ವೈ.ಖಾನ್, ವಿಭವ್, ಮಂಜುನಾಥ್, ರೇವಣ್ಣ, ಶಿವಕುಮಾರ್,ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ರಂಜಿತಾ ವಿನಯ್, ಕಾರ್ಯದರ್ಶಿ ರೇಷ್ಮಾ ರೈ, ಶ್ವೇತಾ ಅನಿಲ್, ಶ್ವೇತಾ ಮೋಹನ್, ಹೇಮಾ ನಾಗರಾಜ್, ಸಂಧ್ಯಾ ವಿಶ್ವನಾಥ್, ಸರಸ ಮಲ್ಲೇಶ್, ಓಂಕಾರಮ್ಮ, ಜಮುನಾ, ಆರತಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net